ಪಾಟ್ನಾ: ನಾಲ್ಕನೇ ಮೇವು ಹಗರಣದಲ್ಲೂ ತಪ್ಪಿತಸ್ಥರಾಗಿರುವ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರಿಗೆ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. 7 ವರ್ಷಗಳ ಕಾಲ ಅವರಿಗೆ ಸೆರೆವಾಸವನ್ನು ವಿಧಿಸಲಾಗಿದೆ.
ಮಾ.19ರಂದು ತೀರ್ಪು ಪ್ರಕಟಗೊಂಡಿದ್ದು, ಲಾಲೂ ಸೇರಿದಂತೆ ಇತರ 18 ಮಂದಿ ತಪ್ಪಿತಸ್ಥರೆಂದು ಘೋಷಿಸಲಾಗಿತ್ತು. 12 ಮಂದಿಯನ್ನು ಆರೋಪದಿಂದ ಮುಕ್ತಗೊಳಿಸಲಾಗಿತ್ತು.
ಲಾಲೂ ಸಿಎಂ ಆಗಿದ್ದ 1995-1996ರ ಅವಧಿಯಲ್ಲಿ ದುಮ್ಕಾ ಖಜಾನೆಯಿಂದ ರೂ.3.13 ಕೋಟಿ ರೂಪಾಯಿಗಳನ್ನು ಕೊಳ್ಳೆ ಹೊಡೆದ ಪ್ರಕರಣ ಇದಾಗಿದೆ.
ಈಗಾಗಲೇ ಇತರ ಮೇವು ಹಗರಣಗಳಲ್ಲಿ ಲಾಲೂ ತಪ್ಪಿತಸ್ಥರೆಂದು ಸಾಬೀತಾಗಿ ಜೈಲು ಪಾಲಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.