ನವದೆಹಲಿ: ಮೂರು ನದಿಗಳ ಮೂಲಕ ಬಳಕೆಯಾಗದ ಭಾರತದ ನೀರು ಪಾಕಿಸ್ಥಾನಕ್ಕೆ ಹರಿಯುವುದನ್ನು ತಡೆಯಲು ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂಬುದಾಗಿ ಕೇಂದ್ರ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಮೂರು ನದಿಗಳ ನೀರನ್ನು ಪಾಕಿಸ್ಥಾನಕ್ಕೆ ನೀಡುವುದು ಬೇರೆ ವಿಷಯ. ಆದರೆ ನಮ್ಮ ಅಭಿವೃದ್ಧಿಗೆ ಅತ್ಯಗತ್ಯವಾದ ನೀರು ಆ ದೇಶಕ್ಕೆ ಹರಿಯುವುದನ್ನು ತಪ್ಪಿಸಬೇಕಾಗಿದೆ. ಹೀಗಾಗಿ ಡ್ಯಾಂಗಳನ್ನು ನಿರ್ಮಾಣ ಮಾಡಲು ಚಿಂತಿಸಲಾಗಿದೆ ಎಂದಿದ್ದಾರೆ.
ಉತ್ತರಾಖಂಡದಲ್ಲಿ ಡ್ಯಾಂ ನಿರ್ಮಾಣ ಮಾಡುತ್ತೇವೆ. ಇದರಿಂದ ಪಂಜಾಬ್, ಹರಿಯಾಣ, ರಾಜಸ್ಥಾನಗಳ ನೀರಿನ ಸಮಸ್ಯೆಗಳನ್ನೂ ಹೋಗಲಾಡಿಸಲು ಸಹಾಯಕವಾಗುತ್ತದೆ ಎಂದಿದ್ದಾರೆ.
ವಿಭಜನೆಯ ಸಂದರ್ಭದಲ್ಲಿ ನಮಗೆ ಮೂರು ನದಿಗಳು ಸಿಕ್ಕಿವೆ. ಆದರೂ ಅವುಗಳ ನೀರಿನ ಹಂಚಿಕೆಯನ್ನು ಸರಿಯಾಗಿ ನಾವು ಬಳಸಿಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.