ನವದೆಹಲಿ: ಇಂಡಿಯನ್ ಎಕ್ಸ್ಪ್ರೆಸ್ ಬಿಡುಗಡೆ ಮಾಡಿರುವ 100 ಪ್ರಭಾವಿ ಭಾರತೀಯ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಟಾಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು 3ನೇ ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು 4ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಲ್ಲದೇ ಇವರು ಪ್ರಭಾವಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ರಾಜಕಿಯೇತರ ನಾಯಕರು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 5ನೇ ಮತ್ತು ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು 6ನೇ ಸ್ಥಾನ ಪಡೆದುಕೊಂಡಿದ್ದಾರೆ. ಸುಷ್ಮಾ ಸ್ವರಾಜ್ ಅವರಿಗೆ 21ನೇ, ನಿರ್ಮಲಾ ಸೀತಾರಾಮನ್ ಅವರಿಗೆ 22ನೇ ಸ್ಥಾನ ದೊರೆತಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಪಟ್ಟಿಯಲ್ಲಿ ಸ್ಥಾನ ದೊರೆತಿಲ್ಲ, ಆದರೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು 58ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.