ನವದೆಹಲಿ: ಎಸ್ಟಿ/ಎಸ್ಸಿ ಕಾಯ್ದೆಯನ್ನು ದುರ್ಬಲ ಮಾಡಲಾಗುತ್ತಿದೆ ಎಂದು ಆರೋಪಿಸಿ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಬೀದಿಗಿಳಿದು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕೆಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೂ ತಿರುಗಿದೆ.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹಸಚಿವ ರಾಜನಾಥ ಸಿಂಗ್ ಅವರು, ‘ಆದೇಶವನ್ನು ಮರುಪರಿಶೀಲನೆಗೊಳಿಸುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಹಾಕಿದ್ದೇವೆ. ಪ್ರತಿಭಟನಾಕಾರರು ಶಾಂತಿ ಕಾಪಾಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.
ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ಶಾಂತಿಯನ್ನು ಕಾಪಾಡಿಕೊಳ್ಳಬೇಕು, ಹಿಂಸೆಯನ್ನು ಪ್ರಚೋದಿಸಬಾರದು ಎಂದಿದ್ದಾರೆ.
ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾದ ದೂರುಗಳಲ್ಲಿ ಶೀಘ್ರವೇ ಬಂಧನ ಅಥವಾ ಪ್ರಕರಣ ದಾಖಲಿಸಬೇಕಾಗಿಲ್ಲ ಎಂದು ಸುಪ್ರೀಂ ಆದೇಶಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.