ನವದೆಹಲಿ: ಪ್ರತಿವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ತಾವೇ ಸ್ವತಃ ಗಿಡಗಳನ್ನು ನೆಟ್ಟು ದೇಶದ ಜನತೆಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.
‘ಪರಿಸರವನ್ನು ಸ್ವಚ್ಛ ಹಾಗೂ ಹಸಿರಾಗಿ ಇಡಿ’ ಎಂದು ಮೋದಿ ಕಳೆದ ಬಾರಿ ಕರೆ ನೀಡಿದ್ದರು, ಈ ಬಾರಿ ಸ್ವತಃ ಅವರೇ ಗಿಡಗಳನ್ನು ನೆಟ್ಟು ಹಸಿರಿನ ಮಹತ್ವವನ್ನು ಸಾರಲಿದ್ದಾರೆ.
ಪ್ರಕೃತಿ ತಾಯಿಯನ್ನು ಮತ್ತು ಭೂಮಿಯ ರಕ್ಷಣೆಗಾಗಿ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ.
ಈ ಬಾರಿ ‘ಏಳು ಬಿಲಿಯನ್ ಕನಸುಗಳು, ಒಂದು ಭೂಮಿ, ಕಾಳಜಿಯಿಂದ ಆಸ್ವಾದಿಸಿ’(Seven Billion Dreams. One Planet. Consume with Care”) ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.