ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣ ಮತ್ತೊಂದು ವಿವಾದವನ್ನು ಸೃಷ್ಟಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಈ ವಿವಾದದ ಕೇಂದ್ರ ಬಿಂದುವಾಗಿದ್ದಾರೆ.
ಸಿಖ್ ದಂಗೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಜಗದೀಶ್ ಟೈಟ್ಲರ್ಗೆ ಕ್ಲೀನ್ ಚಿಟ್ ದೊರಕಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾರಣ ಎಂದು ಶಸ್ತ್ರಾಸ್ತ್ರ ಡೀಲರ್ ಅಭಿಷೇಕ್ ವರ್ಮಾ ಆರೋಪಿಸಿದ್ದಾರೆ.
ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ನನಗೆ ಪ್ರಕರಣದಲ್ಲಿ ಕ್ಲೀನ್ಚಿಟ್ ದೊರೆಯಿತು ಎಂದು 2008ರಲ್ಲಿ ಜಗದೀಶ್ ಟೈಟ್ಲರ್ ತನ್ನ ಬಳಿ ಹೇಳಿಕೊಂಡಿದ್ದಾಗಿ ಅಭಿಷೇಕ್ ಸಿಬಿಐ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಅಭಿಷೇಕ್ ಅವರು ನಾವಲ್ ವಾರ್ ರೂಂ ಲೀಕ್ ಮತ್ತು ಇತರ ವಂಚನೆ, ಫೋರ್ಜರಿ ಪ್ರಕರಣಗಳಲ್ಲಿ ಆರೋಪಿಯಾಗಿ ಸಿಬಿಐ ತನಿಖೆ ಎದುರಿಸುತ್ತಿದ್ದಾರೆ.
ಟೈಟ್ಲರ್ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ್ದಾರೆ, ಹವಾಲದ ಮೂಲಕ ಹಣ ನೀಡಿದ್ದಾರೆ ಎಂದು ಅಭಿಷೇಕ್ ಹೇಳಿದ್ದಾರೆ.
ಒಟ್ಟಿನಲ್ಲಿ ಅವರ ಹೇಳಿಕೆ ಮತ್ತೆ ಕಾಂಗ್ರೆಸ್ಗೆ ಮುಜುಗರವನ್ನು ಉಂಟು ಮಾಡಿದ್ದು, ಮನಮೋಹನ್ ಸಿಂಗ್ ಅವರ ಮೇಲೆ ಸಂಶಯವನ್ನು ಹೆಚ್ಚಿಸುವಂತೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.