ನವದೆಹಲಿ: ಮುಸ್ಲಿಂ ಸಮುದಾಯದಲ್ಲಿನ ‘ತ್ರಿವಳಿ ತಲಾಖ್’ ಪದ್ಧತಿಯನ್ನು ಅಪರಾಧೀಕರಣಗೊಳಿಸುವ ಮಸೂದೆ ರಾಜ್ಯಸಭೆಯಲ್ಲಿ ಅನುಮೋದನೆಗೊಳ್ಳದ ಹಿನ್ನಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೆ ತರಲು ಕೇಂದ್ರ ಚಿಂತನೆ ನಡೆಸಿದೆ.
ಈಗಾಗಲೇ ಲೋಕಸಭೆಯಲ್ಲಿ ‘ತ್ರಿವಳಿ ತಲಾಖ್’ ರದ್ದುಪಡಿಸುವ ‘ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ’ಯನ್ನು ಅಂಗೀಕಾರಗೊಳಿಸಲಾಗಿದೆ, ಆದರೆ ಪ್ರತಿಪಕ್ಷಗಳ ಹಠದ ಕಾರಣಕ್ಕೆ ರಾಜ್ಯಸಭೆಯಲ್ಲಿ ಇದು ಅಂಗೀಕಾರಗೊಂಡಿಲ್ಲ.
ಹೀಗಾಗಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಈ ಕಾಯ್ದೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಾತುಕತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.