ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಆರೋಪಿಗಳಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಮತ್ತು ಇತರ ಮೂವರ ವಿರುದ್ಧ ಕಳೆದ 12 ವರ್ಷಗಳಿಂದ ಕಾನೂನು ವಿಚಾರಣೆ ನಡೆಸುತ್ತಿರುವ ಕರ್ನಾಟಕ ಅದಕ್ಕಾಗಿ ಕೋಟ್ಯಾಂತರ ರೂಪಾಯಿಗಳನ್ನು ವ್ಯಯ ಮಾಡಿದೆ.
ಇದೀಗ ಆ ಹಣವನ್ನು ತಮಿಳುನಾಡಿನಿಂದಲೇ ವಸೂಲು ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಹೀಗಾಗಿ ಸುಮಾರು 5.11 ಕೋಟಿ ರೂಪಾಯಿಯ ಬಿಲ್ನ್ನು ನೆರೆಯ ರಾಜ್ಯಕ್ಕೆ ಕಳುಹಿಸಿ ಕೊಡಲು ಮುಂದಾಗಿದೆ.
ಅಲ್ಲದೇ ವಿಚಾರಣೆ ಎದುರಿಸಲು ಜಯಲಲಿತಾ ಅವರು ರಾಜ್ಯಕ್ಕೆ ಆಗಮಿಸಿದ ವೇಳೆ ಅವರ ಭದ್ರತೆಗೆ ಖರ್ಚಾದ ಹಣವನ್ನೂ ತಮಿಳುನಾಡಿನಿಂದ ವಸೂಲು ಮಾಡಲು ಕರ್ನಾಟಕ ಮುಂದಾಗಿದೆ. ಈ ವಿಷಯವನ್ನು ಕಾನೂನು ಸಚಿವ ಟಿಬಿ ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.
2003ರಲ್ಲಿ ಜಯಾ ಪ್ರಕರಣವನ್ನು ತಮಿಳುನಾಡಿನಿಂದ ಕರ್ನಾಟಕಕ್ಕೆ ವರ್ಗಾವಣೆ ಮಾಡಲಾಯಿತು. ಡಿಎಂಕೆ ಪಕ್ಷ ಸಲ್ಲಿಸಿದ ಮನವಿಯ ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.