ನವದೆಹಲಿ: ನರೇಂದ್ರ ಮೋದಿ ಸರ್ಕಾರದ ವಿರುದ್ಧ ರಾಜಕೀಯ ರಣತಂತ್ರವನ್ನು ರೂಪಿಸುವ ಸಲುವಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಜೂನ್ 9ರಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.
2014ರ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡ ಬಳಿಕ ನಡೆಯುತ್ತಿರುವ ಕಾಂಗ್ರೆಸ್ ಮುಖ್ಯಮಂತ್ರಿಗಳ ಮೊದಲ ಸಭೆ ಇದಾಗಿದೆ.
ಸೋನಿಯಾ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರು, ಪ್ರಧಾನ ಕಾರ್ಯದರ್ಶಿಗಳು, ಉನ್ನತ ಕಾರ್ಯಕರ್ತರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪ್ರಚಾರ ರಣತಂತ್ರ ರೂಪಿಸುವ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಈ ಸಭೆಯನ್ನು ಕರೆಯಲಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.