ಬೆಂಗಳೂರು: ಮೇ.12ರಂದು ಚುನಾವಣೆ ಎದುರಿಸಲಿರುವ ಕರ್ನಾಟಕದಲ್ಲಿ ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ರಾಜಕೀಯ ಪಕ್ಷಗಳು ಕೊನೆ ಎರಡು ದಿನ ಮತದಾರರನ್ನು ವೈಯಕ್ತಿವಾಗಿ ಭೇಟಿಯಾಗಿ ಮತಯಾಚನೆ ಮಾಡಬಹುದಾಗಿದೆ.
ಇಂದು ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ರಾಜ್ಯದ ಮೂಲೆ ಮೂಲೆಯಲ್ಲಿ ಅಪಾರ ಸಂಖ್ಯೆಯ ಸಭೆ, ಸಮಾರಂಭಗಳನ್ನು ನಡೆಸಲಿವೆ. ಬಿಜೆಪಿ 150 ಕ್ಷೇತ್ರಗಳಲ್ಲಿ ರೋಡ್ಶೋ ನಡೆಯಲಿದೆ. ಕೇಂದ್ರದ ನಾಯಕರು, ವಿವಿಧ ರಾಜ್ಯಗಳ ಸಿಎಂಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬಿಜೆಪಿ ಪರ ಮತಯಾಚನೆ ಮಾಡಲಿದ್ದಾರೆ.
ಕಾಂಗ್ರೆಸ್, ಜೆಡಿಎಸ್ ಕೂಡ ಇಂದು ಅಬ್ಬರದ ಪ್ರಚಾರದಲ್ಲಿ ತೊಡಗಿ ಮತದಾರರನ್ನು ಸೆಳೆಯಲಿದೆ.
ಇಂದು ಸಂಜೆ 5 ಗಂಟೆಯೊಳಗೆ ಬಹಿರಂಗ ಪ್ರಚಾರವನ್ನು ಅಂತ್ಯ ಮಾಡಬೇಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.