ಕೌಲಾಲಂಪುರ: ಮಲೇಷ್ಯಾದಲ್ಲಿ ಶುಕ್ರವಾರ ಲಘು ಭೂಕಂಪನವಾಗಿದೆ, ಭೂಕಂಪದ ತೀವ್ರತೆ ರಿಕ್ಟರ್ ಮಾಪನದಲ್ಲಿ 5.9 ಎಂದು ದಾಖಲಾಗಿದೆ.
ರನೌ ಜಿಲ್ಲೆಯ ಸುಮಾರು 16 ಕಿ.ಮೀ ದೂರದಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ ಎಂದು ಮಲೇಷ್ಯಾದ ಮೆಟ್ರೊಲಾಜಿಕಲ್ ಡಿಪಾರ್ಟ್ಮೆಂಟ್ ತಿಳಿಸಿದೆ.
ಕೋಟ ಕಿನಬಲು, ಕುದತ್, ಕೋಟ ಮರುಡು ಜಿಲ್ಲೆಗಳಲ್ಲಿ ಭೂಕಂಪನದ ಅನುಭವವಾಗಿದೆ. ಸುಮಾರು 30 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ ಎಂದು ಮೂಲಗಳು ತಿಳಿಸಿವೆ.
ಹಲವು ಕಟ್ಟಡಗಳ ಕಿಟಕಿ ಗಾಜುಗಳು ಮತ್ತು ಪೈಪ್ಲೈನ್ಗಳು ಭೂಕಂಪದ ತೀವ್ರತೆಗೆ ಭಗ್ನಗೊಂಡಿವೆ.
ಇತ್ತೀಚಿಗಷ್ಟೇ ನೇಪಾಳದಲ್ಲಿ ಭೀಕರ ಭೂಕಂಪ ಸಂಭವಿಸಿತ್ತು, ಭಾರತ, ಜಪಾನ್, ಪಾಕಿಸ್ಥಾನದಲ್ಲೂ ಭೂಮಿ ಕಂಪಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.