ಗೋರಖ್ಪುರ: ಗೋರಖ್ಪುರ ಜಿಲ್ಲೆಯನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಅಭಿವೃದ್ಧಿಪಡಿಸಲು ಸರ್ವ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಯೋಗಿ, ‘ಹಿಂದೆ ರಾಜ್ಯದಲ್ಲಿದ್ದ ಸರ್ಕಾರಗಳು ರಾಮಗ್ರಹ ಸರೋವರವನ್ನು ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿವೆ’ ಎಂದು ಆರೋಪಿಸಿದರು.
‘ಈ ಹಿಂದೆ ರಾಜ್ಯ ಸರೋವರ ಸಂರಕ್ಷಣಾ ಯೋಜನೆಯಡಿ ಅನುದಾನ ಬಿಡುಗಡೆಯಾದರೂ ಉತ್ತಮ ಆಡಳಿತದ ಕೊರತೆಯಿಂದಾಗಿ ಸರೋವರದ ಅಭಿವೃದ್ಧಿಯಾಗಿಲ್ಲ’ ಎಂದರು.
ಪ್ರಸ್ತುತ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜಂಟಿ ಸಹಯೋಗದೊಂದಿಗೆ ರಾಮಗ್ರಹ ಸರೋವರ ಅಭಿವೃದ್ಧಿಯಾಗಲಿದ್ದು, ಪ್ರವಾಸೋದ್ಯಮದ ಕೇಂದ್ರ ಆಕರ್ಷಣೆಯಾಗಲಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.