ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯುತ್ ಮತ್ತು ನೀರಿನ ಸಮಸ್ಯೆಯನ್ನು ನಿವಾರಿಸುವಲ್ಲಿ ವಿಫಲವಾಗಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ದೆಹಲಿ ಬಿಜೆಪಿಯ 14 ಜಿಲ್ಲಾ ಘಟಕಗಳು ಎಎಪಿ ವಿರುದ್ಧ ಧರಣಿಯನ್ನು ಹಮ್ಮಿಕೊಂಡಿದ್ದು, ತಕ್ಷಣ ಸಮಸ್ಯೆಯನ್ನು ಬಗೆಹರಿಸುವಂತೆ ಎಎಪಿಯನ್ನು ಆಗ್ರಹಿಸಿದೆ.
ಎಎಪಿ ಸರ್ಕಾರದ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ, ಬೇಸಿಗೆಯಲ್ಲಿ ನೀರಿನ ಮತ್ತು ವಿದ್ಯುತ್ ಸಮಸ್ಯೆಯನ್ನು ನೀಗಿಸಲು ಯಾವುದೇ ಯೋಜನೆಯನ್ನು ರೂಪಿಸಲಾಗಿಲ್ಲ ಎಂದು ದೆಹಲಿ ಬಿಜೆಪಿ ಮುಖಂಡ ಸತೀಶ್ ಉಪಾಧ್ಯಾಯ ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.