ಬೆಂಗಳೂರು: ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯವರು ಇಂದು ವಿಶ್ವಾಸಮಯಾಚನೆ ಮಾಡಲಿದ್ದಾರೆ. ಅವರು ಈ ಅಗ್ನಿಪರೀಕ್ಷೆಯಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ನೀಡಿರುವ ಹೇಳಿಕೆ ಮಾತ್ರ ಈಗ ಹಲವಾರು ಗೊಂದಲಗಳಿಗೆ ಎಡೆಮಾಡಿಕೊಟ್ಟಿದೆ.
ವಿಶ್ವಾಸಮತಯಾಚನೆ ಬಳಿಕವಷ್ಟೇ ಕುಮಾರಸ್ವಾಮಿ 5 ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆಯೋ ಅಥವಾ ಇಲ್ಲವೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ ಎಂದು ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಅವರ ಈ ಹೇಳಿಕೆಯ ಮರ್ಮವೇನು ಎಂಬುದು ಮಾತ್ರ ತಿಳಿದು ಬಂದಿಲ್ಲ. ಬಿಜೆಪಿಯನ್ನು ಹೊರಗಿಡುವ ಉದ್ದೇಶದೊಂದಿಗೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ರಚನೆ ಮಾಡಿವೆ. ಆದರೆ ಒಳಗೊಳಗೆ ಹೊಗೆಯಾಡುತ್ತಿರುವ ಅಸಮಾಧಾನಗಳು ಈ ಮೈತ್ರಿ ಎಷ್ಟು ದಿನ ಎಂಬ ಸಂಶಯವನ್ನು ಹುಟ್ಟು ಹಾಕಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.