ಮಂಗಳೂರು: ಮಂಗಳೂರಿನಲ್ಲಿ ಅತೀವೃಷ್ಠಿಯಿಂದಾಗಿ ಅಪಾರ ಆಸ್ತಿ ಪಾಸ್ತಿಗಳಿಗೆ ಸುಮಾರು 100 ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ. ರಾಜ್ಯ ಸರಕಾರ ತಕ್ಷಣವೇ 100 ಕೋಟಿಯ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದ್ದಾರೆ. ತಕ್ಷಣವೇ ರಾಜ್ಯ ಸರಕಾರದಿಂದ ಅಧಿಕಾರಿಗಳನ್ನು ಇಲ್ಲಿಗೆ ಕಳುಹಿಸಿಕೊಡಬೇಕೆಂದು ಒತ್ತಾಯಸಿದ್ದಾರೆ.
ಅತೀವೃಷ್ಠಿಯಿಂದ ಹಾನಿಗೊಳಗಾದ ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೈ ಆನೆಗುಂಡಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ವಿವಿಧ ಹಾನಿಗೊಳಗಾದ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯ ಸರಕಾರ ಹಾಗೂ ಮಹಾನಗರ ಪಾಲಿಕೆ ನಿರ್ಲಕ್ಷದಿಂದ ಈ ರೀತಿಯ ಘಟನೆಗಳು ನಡೆದಿವೆ. ಭಾರಿ ಮಳೆಯಿಂದಾಗಿ ಮಂಗಳೂರಿನಲ್ಲಿ ಸಾವಿರಾರು ಮಂದಿ ಮನೆ-ಮಠ ಕಳೆದುಕೊಂಡಿದ್ದಾರೆ. ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಆದ್ರೆ ಮುಖ್ಯಮಂತ್ರಿ ಅವರು ಜನರಿಗೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ. ಅತೀವೃಷ್ಟಿಯಿಂದ 100 ಕೋಟಿಗೂ ಹೆಚ್ಚು ನಷ್ಟವಾಗಿದೆ. ಕೂಡಲೇ ಸರಕಾರ ಪ್ಯಾಕೇಜ್ ಘೋಷಣೆ ಮಾಡಬೇಕು. ರಾಜ್ಯದಿಂದ ಅಧಿಕಾರಿಗಳನ್ನು ಕೂಡಲೇ ಕಳುಹಿಸಬೇಕೆಂದು ಒತ್ತಾಯಿಸಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿನ ಜನರಿಗೆ ಸಾಂತ್ವನ ಹೇಳಿದ್ದಾರೆ ಎಂದು ಹೇಳಿದರು.
ನಿನ್ನೆ ಕುಂಭದ್ರೋಣ ಮಳೆಗೆ ಊರ್ವ ಪರಿಸರದಲ್ಲಿ ಹಲವೆಡೆ ಅಪಾರ ಆಸ್ತಿ-ಪಾಸ್ತಿ ಹಾನಿಯಾಗಿದ್ದು ರಾಕೇಶ್ ಕಾಮತ್ ಅವರ ಮನೆಗೆ ನಿರ್ಮಿಸಿದ ರಸ್ತೆ ತಡೆಗೋಡೆ ಕುಸಿದಿದೆ. ಅಲ್ಲದೇ, ಹೊಯಿಗೆಬೈಲಿನ ಪಾಂಡುರಂಗ ಮತ್ತು ಹರೀಶ್ ವಾಸಿಸುವ ಮನೆ ಕುಸಿದು ಅಪಾರ ಪ್ರಮಾಣದಲ್ಲಿ ಆಸ್ತಿ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಪರಿಹಾರ ಕಾರ್ಯಾಚರಣೆಗೆ ಸೂಚಿಸಿದ್ದಾರೆ. ಸ್ಥಳಕ್ಕೆ ಪಾಲಿಕೆಯ ಜೆಇ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಭೇಟಿ ಸ್ಥಳದಲ್ಲಿ ಕಿಶೋರ್, ನಂದ ಕಿಶೋರ್ ಮತ್ತು ಗಣೇಶ್ ಜೊತೆಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.