ಲಕ್ನೋ: ನರೇಂದ್ರ ಮೋದಿ ಸರ್ಕಾರ ಭಯೋತ್ಪಾದಕರ ಬಗ್ಗೆ ಶೂನ್ಯ ತಾಳ್ಮೆ ನೀತಿಯನ್ನು ಅನುಸರಿಸುತ್ತಿದ್ದು, ಉಗ್ರ ವಿರೋಧಿ ಕಾರ್ಯಾಚರಣೆಗಳು ನಿರಂತರವಾಗಿ ಮುಂದುವರೆಯಲಿದೆ ಎಂದು ಗೃಹಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಆಡಳಿತಾವಧಿಯಲ್ಲಿ ವಿವಿಧ ಉಗ್ರ ವಿರೋಧಿ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಗಳ ಕೈಯಿಂದ ಹತ್ಯೆಗೀಡಾದ ಉಗ್ರರ ಅಂಕಿಅಂಶಗಳನ್ನು ತೆರೆದಿಟ್ಟರು.
4ವರ್ಷದಲ್ಲಿ ಜಮ್ಮು ಕಾಶ್ಮೀರದಲ್ಲಿ ಒಟ್ಟು 619 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದ ಅವರು, ರಂಜಾನ್ ತಿಂಗಳಲ್ಲಿ ಉಗ್ರ ವಿರೋಧಿ ಕಾರ್ಯಾಚರಣೆಗಳನ್ನು ನಾವು ನಿಲ್ಲಿಸಿಲ್ಲ, ಬದಲಿಗೆ ಮುಂದೂಡಿದ್ದೇವೆ ಅಷ್ಟೇ ಎಂದಿದ್ದಾರೆ.
ಯುಪಿಎ-2 ಅವಧಿಯಲ್ಲಿ 471 ಉಗ್ರರನ್ನು ಹತ್ಯೆ ಮಾಡಲಾಗಿತ್ತು, ಆದರೆ ಬಿಜೆಪಿಯ 4 ವರ್ಷದ ಅವಧಿಯಲ್ಲಿ 619 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.