ಬೆಂಗಳೂರು : ರಾಜ್ಯದಾದ್ಯಂತ ಕೆರೆ ಹಾಗೂ ಗುಂಡು ತೋಪುಗಳ ರಕ್ಷಣೆ ಮತ್ತು ಸಂರಕ್ಷಣೆ ಮಾಡುವುದಕ್ಕಾಗಿ ರಚಿಸಲಾಗಿರುವ ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ ರಾಜ್ಯದಲ್ಲಿ ಶುಕ್ರವಾರದಿಂದ ಜಾರಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈಹಿಂದೆ ಗ್ರಾಮಕ್ಕೊಂದು ಕೆರೆಗಳಿರುತ್ತಿದ್ದು, ಪ್ರಸಕ್ತ ಈ ಕರೆಗಳು ಒತ್ತುವರಿಯಾಗುತ್ತಿವೆ, ಅಭಿವೃದ್ಧಿಯ ನಾಗಾಲೋಟದಲ್ಲಿ ಕಾಡು ,ಬೇಸಾಯ ಕಡಿಮೆಯಾಗುತ್ತಿದ್ದು ಪರಿಸರದ ಸಂರಕ್ಷಣೆ ಕಡಿಮೆಯಾಗುತ್ತಿದೆ. ಇದು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ರಾಜ್ಯಕ್ಕೂ ಅಭಿವೃದ್ಧಿ ಮುಖ್ಯವಾದ ಕಾರಣ ಅಭಿವೃದ್ಧಿಯೊಂದಿಗೆ ಪರಿಸರ ಸಂರಕ್ಷಣೆಯೂ ಮಾಡಬೇಕಾಗಿದೆ ಎಂದರು.
ಕೆರೆಗಳ ಒತ್ತುವರಿ ತೆರೆವು ಮತ್ತು ನಿರ್ವಹಣೆ ಮತ್ತು ಸಂರಕ್ಷಣೆ ಕೆಲಸವನ್ನು ಈ ಪ್ರಾಧಿಕಾರ ಮಾಡಲಿದೆ. ರಾಜ್ಯದಾದ್ಯಂತ ಎಲ್ಲೇ ಕೆರೆಗಳು ಒತ್ತುವರಿಯಾಗಿದ್ದರೂ ಅದನ್ನು ತೆರವಿಗೆ ಕಾರ್ಯಾಚರಣೆ ಮಾಡಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನಮಗೆ ಸಾರ್ವಜನಿಕ ಆಸ್ತಿಗಳು ನಮ್ಮದು ಭಾವನೆ ಮೂಡ ಬೇಕಾಗಿದೆ. ಸರಕಾರದ ಆಸ್ತಿಗಳ ಒತ್ತುವರಿ, ಮಾಲಿನ್ಯಗಳು ಉಂಟಾದಲ್ಲಿ ಸಾರ್ವಜನಿಕರು ಸಂರಕ್ಷಣೆಗೆ ಮುಂದಾಗಬೇಕು. ಈ ಉದ್ದೇಶದಿಂದ ಸರಕಾರ ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವನ್ನು ಅನುಷ್ಠಾನಕ್ಕೆ ತಂದಿದೆ ಎಂದರು.
ಪರಿಸರ ಸಂರಕ್ಷಣೆಯತ್ತ ಸರಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದು ಸಾರ್ವಜನಿಕರಿಂದ ಅಪೇಕ್ಷಿತ ಮಟ್ಟದಲ್ಲಿ ಸ್ಪಂದನೆ ವ್ಯಕ್ತವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.