ಬೆಂಗಳೂರು: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರಿಗೆ ದಂಡ ವಿಧಿಸಲು ಹೊಸ ಕಾನೂನು ರೂಪಿಸಲಾಗುವುದು ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.
ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ’ಜನರಿಗೆ ಕಸ ಎಸೆಯದಂತೆ ಅರಿವು ಮೂಡಿಸಲಾಗುತ್ತಿದೆ. ಕಸ ಎಸೆಯುವವರಿಗೆ ದಂಡ ವಿಧಿಸಲು ಕಾನೂನು ಜಾರಿಗೆ ತರುವುದು ಅನಿವಾರ್ಯವಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನ ಮನೆ ಮನೆ ತಲುಪುತ್ತಿದ್ದು, ಇದು ಯಶಸ್ವಿಯಾಗುವ ಭರವಸೆಯನ್ನು ವ್ಯಕ್ತಪಡಿಸಿದರು.
ದಂಡ ವಿಧಿಸುವ ಹೊಸ ಕಾನೂನನ್ನು ಕಾನೂನಾತ್ಮಕವಾಗಿ ತಿದ್ದುಪಡಿ ಮಾಡಲಾಗುತ್ತಿದ್ದು, ಮುಂದಿನ ಸಂಸತ್ ಅಧಿವೇಶನದಲ್ಲಿ ಈ ಕಾಯ್ದೆಯನ್ನು ಮಂಡಿಸಲಾಗುವುದು ಎಂದವರು ತಿಳಿಸಿದರು.
ಮಹಾತ್ಮಾ ಗಾಂಧಿಯವರ ಸ್ವಚ್ಛತಾ ಕನಸನ್ನು ಮೋದಿ ಸರ್ಕಾರ ಸಾಕಾರಗೊಳಿಸುವ ಪ್ರಯತ್ನ ನಡೆಸುತ್ತಿದ್ದು, ಜನರು ಪರಿಸರದ ಕಾಳಜಿ ವಹಿಸಿ ಭೂಮಿಯನ್ನು ಉಳಿಸುವ ಕಾರ್ಯ ಮಾಡಬೇಕಿದೆ ಎಂದು ಸಲಹೆ ನೀಡಿದರು. ಪರಿಸರ ಸಂರಕ್ಷಣೆಗೆ ರಾಜ್ಯ ಸರ್ಕಾರ ನೀಡುತ್ತಿರುವ ಸಹಕಾರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.