ಮುಂಬಯಿ: ಇನ್ನು ಮುಂದೆ ಮುಂಬಯಿ ಮಹಾನಗರದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿದರೆ ರೂ.10,000 ಮೊತ್ತವನ್ನು ದಂಡವಾಗಿ ನೀಡಬೇಕಾಗುತ್ತದೆ. ಪ್ಲಾಸ್ಟಿಕ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಬೃಹನ್ ಮುಂಬಯಿ ಮುನ್ಸಿಪಲ್ ಕಾರ್ಪೋರೇಶನ್ ನಿರ್ಧರಿಸಿದೆ.
ಜೂನ್ 23ರಿಂದ ಪ್ಲಾಸ್ಟಿಕ್ ಬಳಸಿದರೆ ರೂ.10 ಸಾವಿರ ದಂಡ ವಿಧಿಸುವುದಾಗಿ ಪಾಲಿಕೆ ಘೋಷಿಸಿದ್ದು, ಪ್ಲಾಸ್ಟಿಕ್ ಸಮಸ್ಯೆ ಹೋಗಲಾಡಿಸುವಲ್ಲಿ ತೆಗೆದುಕೊಂಡ ದಿಟ್ಟ ನಿರ್ಧಾರ ಎಂದು ಬಣ್ಣಿಸಲಾಗಿದೆ.
ಪ್ಲಾಸ್ಟಿಕ್ ಬಳಕೆಯ ಬಗ್ಗೆ ಕಣ್ಣಿಡುವ ಸಲುವಾಗಿಯೇ ಪರಿವೀಕ್ಷಕರನ್ನು ನಿಯೋಜನೆಗೊಳಿಸಲಾಗಿದ್ದು, ಕಟ್ಟುನಿಟ್ಟಿನ ಪ್ಲಾಸ್ಟಿಕ್ ನಿಷೇಧ ಕ್ರಮವನ್ನು ಜಾರಿಗೊಳಿಸುವ ಹೊಣೆಯನ್ನು ಇವರಿಗೆ ನೀಡಲಾಗಿದೆ.
ಒಟ್ಟು 225 ಪರಿವೀಕ್ಷಕರನ್ನು ನಿಯೋಜಿಸಲಾಗಿದ್ದು, ಇವರು ವ್ಯಾಪಾರಿಗಳು ಮತ್ತು ಗ್ರಾಹಕರ ಮೇಲೆ ನಿಗಾ ಇರಿಸಲಿದ್ದಾರೆ. ಪ್ಲಾಸ್ಟಿಕ್ ಬಳಕೆ ಕಂಡು ಬಂದರೆ ರೂ.10 ಸಾವಿರ ದಂಡ ವಿಧಿಸುತ್ತಾರೆ ಎಂದು ಪಾಲಿಕೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.