ಭಿವಂಡಿ: ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಭಿವಂಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮಂಗಳವಾರ ಪ್ರಕರಣವನ್ನು ದಾಖಲಿಸಿಕೊಂಡಿದೆ.
ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್ 499 ಮತ್ತು 500ರ ಅನ್ವಯ ರಾಹುಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
2014ರ ಮಾರ್ಚ್ನಲ್ಲಿ ಚುನಾವಣಾ ಸಮಾವೇಶವೊಂದರಲ್ಲಿ ಮಹಾತ್ಮ ಗಾಂಧೀಜಿಯವರನ್ನು ಆರ್ಎಸ್ಎಸ್ ಹತ್ಯೆ ಮಾಡಿದೆ ಎಂಬುದಾಗಿ ರಾಹುಲ್ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿದ್ದ ಆರ್ಎಸ್ಎಸ್ ಕಾರ್ಯಕರ್ತ ಹಾಗೂ ವಕೀಲ ರಾಜೇಶ್ ಕುಂಟೆ ಎಂಬುವವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.
ಇಂದು ವಿಚಾರಣೆಗೆ ಹಾಜರಾಗಿದ್ದ ರಾಹುಲ್ ತಾನು ತಪ್ಪಿತಸ್ಥನಲ್ಲ ಎಂದು ವಾದಿಸಿದ್ದರು. ಆದರೂ ಕೋರ್ಟ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.