ಕೋಲ್ಕತ್ತಾ: ಪಶ್ಚಿಮಬಂಗಾಳಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ತೃಣ ಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿಯನ್ನು ನಡೆಸಿದರು.
ಟಿಎಂಸಿ ಮತ್ತು ಎಡ ಪಕ್ಷಗಳಿಂದ ಪಶ್ಚಿಮ ಬಂಗಾಳದ ಅಭಿವೃದ್ಧಿ ಸಾಧ್ಯವಿಲ್ಲ, ಕಾಂಗ್ರೆಸ್ ಪಕ್ಷದಿಂದ ಮಾತ್ರ ಇಲ್ಲಿನ ಅಭಿವೃದ್ಧಿ ಸಾಧ್ಯ ಎಂದರು.
ಹೂಗ್ಲಿ ಜಿಲ್ಲೆಯಲ್ಲಿ ನಡೆದ ಸೆಣಬು ಗಿರಣಿ ಕಾರ್ಮಿಕರ ಸಮಾವೇಶದಲ್ಲೂ ಅವರು ಪಾಲ್ಗೊಂಡರು.
ಇಲ್ಲಿ 34 ವರ್ಷಗಳ ಕಾಲ ಎಡ ಪಕ್ಷಗಳು ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಿದರೂ ಅಭಿವೃದ್ಧಿಯನ್ನು ಮಾಡಲಿಲ್ಲ. ಈಗ ಆಡಳಿತದಲ್ಲಿರುವ ಟಿಎಂಸಿ ಕೂಡ ಅಭಿವೃದ್ಧಿಯನ್ನು ಮಾಡುತ್ತಿಲ್ಲ. ಬಂಗಾಳದ ಅಭಿವೃದ್ಧಿ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದರು.
ಸೆಣಬು ಗಿರಣಿ ಕಾರ್ಮಿಕರ ಸಮಸ್ಯೆಯನ್ನು ಆಲಿಸಿದ ಅವರು, ಕಾರ್ಮಿಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಿ ಪರಿಹರಿಸುವುದಾಗಿ ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.