ನವದೆಹಲಿ: 2017-18 ರಲ್ಲಿ ಕೇಂದ್ರ ಸರಕಾರವು 11 ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ. 2013-14 ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ರಾಜ್ಯಗಳಿಗೆ 5 ಲಕ್ಷ ಕೋಟಿ ರೂಪಾಯಿಗಳನ್ನು ಮಾತ್ರ ಹಂಚಿತ್ತು.
ಭಾನುವಾರ ನಡೆದ ನೀತಿ ಆಯೋಗ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗೆಗೆ ಮಾಹಿತಿಯನ್ನು ನೀಡಲಾಗಿದೆ.
ಮೋದಿ ನೇತೃತ್ವದ ಬಿಜೆಪಿ ಸರಕಾರವು 2014 ಕ್ಕೆ ಹೋಲಿಸಿದಲ್ಲಿ 2018 ರಲ್ಲಿ 6 ಲಕ್ಷ ಕೋಟಿ ರೂಪಾಯಿಗಳ ಹೆಚ್ಚುವರಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಇದು 2014 ರ ಅನುದಾನ ಕ್ಕಿಂತ 220% ಹೆಚ್ಚು.
ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಕೇಂದ್ರ ರಾಜ್ಯಗಳ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ಸ್ವಾಯತ್ತತೆಯನ್ನೂ ಕೇಂದ್ರ ಸರಕಾರವು ಕೊಟ್ಟಿದೆ. ಇದಲ್ಲದೆ ಇತ್ತೀಚೆಗೆ ಜಾರಿಗೆ ತರಲಾದ GST ವ್ಯವಸ್ಥೆಯಲ್ಲಿ ಸಂಗ್ರಹವಾದ ಟ್ಯಾಕ್ಸ್ನ ಅರ್ಧಾಂಶವು ಕೇಂದ್ರದ ಹಂಗು ಇಲ್ಲದೇ ಆಯಾ ರಾಜ್ಯಗಳಿಗೆ ನೇರವಾಗಿಯೇ ಸಂದಾಯವಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.