ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಸೋಮವಾರ ಎಲ್.ಕೆ.ಅಡ್ವಾಣಿ, ಅಮಿತಾಭ್ ಬಚ್ಚನ್, ವಿರೇಂದ್ರ ಹೆಗ್ಗಡೆ ಸೇರಿದಂತೆ 9 ಗಣ್ಯರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಇದೇ ವೇಳೆ ಅವರು 20 ಮಂದಿಗೆ ಪದ್ಮಭೂಷಣ, 75 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
66ನೇ ಗಣರಾಜ್ಯೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಒಟ್ಟು 104 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿತ್ತು.
ದಿಲೀಪ್ ಕುಮಾರ್, ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಹಿರಿಯ ವಕೀಲ ಕೆ.ಕೆ. ವೇಣುಗೋಪಾಲ್, ಪರಮಾಣು ವಿಜ್ಞಾನಿ ಪ್ರೊ. ಎಂ.ಆರ್. ಶ್ರೀನಿವಾಸನ್, ವಾಣಿಜ್ಯೋದ್ಯಮಿ ಕರೀಂ ಅಲ್ ಹುಸೇನಿ ಆಗಾ ಖಾನ್, ಉತ್ತರಪ್ರದೇಶದ ಜಗದ್ಗುರು ರಮಾನಂದಾಚಾರ್ಯಸ್ವಾಮಿ ರಾಮಭದ್ರಾಚಾರ್ಯ ಅವರಿಗೂ ಪದ್ಮವಿಭೂಷಣ ಗೌರವ ದೊರೆತಿದೆ.
ರಾಜ್ಯದವರಾದ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (ಪದ್ಮ ವಿಭೂಷಣ), ಸಿದ್ಧಗಂಗಾಮಠದ ಶಿವಕುಮಾರ ಸ್ವಾಮೀಜಿ ಮತ್ತು ವಿಜ್ಞಾನಿ ಡಾ. ಖರಗ್ ಸಿಂಗ್ ವಾಲ್ಡಿಯಾ (ಪದ್ಮ ಭೂಷಣ), ವಿಜ್ಞಾನಿ ಎಸ್. ಅರುಣನ್, ಇನ್ಫೊಸಿಸ್ ಸಂಸ್ಥಾಪಕರಲ್ಲಿ ಒಬ್ಬರಾದ ಟಿ.ವಿ. ಮೋಹನ್ದಾಸ್ ಪೈ (ಪದ್ಮಶ್ರೀ) ಅವರಿಗೆ ಪ್ರಶಸ್ತಿ ಗೌರವ ಲಭಿಸಿದೆ.
ಇದೇ ಸಂದರ್ಭದಲ್ಲಿ, ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಮದನ್ ಮೋಹನ್ ಮಾಳವೀಯ (ಮರಣೋತ್ತರ) ಅವರಿಗೆ ಪ್ರಕಟಿಸಲಾದ ಭಾರತ ರತ್ನ ಪುರಸ್ಕಾರವನ್ನೂ, ಅವರ ಕುಟುಂಬಕ್ಕೆ ರಾಷ್ಟ್ರಪತಿ ಅವರು ಪ್ರದಾನ ಮಾಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.