ನವದೆಹಲಿ: ದೇಶವನ್ನು ಮಾದಕ ವ್ಯಸನ ಮುಕ್ತವನ್ನಾಗಿಸಲು ಹಲವಾರು ಸಂಘ ಸಂಸ್ಥೆಗಳು, ಜನರು ನಿರಂತರವಾದ ಪರಿಶ್ರಮ ಪಡುತ್ತಿದ್ದಾರೆ. ಇಂತಹವರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ಮಾಡಲು ಕೇಂದ್ರ ಸರ್ಕಾರ ಮುಂದೆ ಬಂದಿದೆ.
ಜೂನ್ 26ರಂದು ‘ಮಾದಕ ದ್ರವ್ಯ ಮತ್ತು ಮದ್ಯಪಾನದ ವಿರುದ್ಧ ನಿರಂತರ ಹೋರಾಡುತ್ತಿರುವವರಿಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಸನ್ಮಾನ ಕಾರ್ಯಕ್ರಮವನ್ನು ಆಯೋಜನೆಗೊಳಿಸಿತ್ತು. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಲವರಿಗೆ ರಾಷ್ಟ್ರಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಜೂನ್ 26ನ್ನು ‘ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳಸಾಗಾಣೆ ವಿರೋಧಿ ದಿನ’ವನ್ನಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾದಕ ವ್ಯಸನ ವಿರೋಧಿ ಹೋರಾಟಗಾರರಿಗೆ ಸನ್ಮಾನ ಮತ್ತು ರಾಷ್ಟ್ರಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆಗೊಳಿಸಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.