ನವದೆಹಲಿ: ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ ಕರಾಳ ಚರಿತ್ರೆಯ ಬಗ್ಗೆ ಮುಂಬರುವ ಪೀಳಿಗೆಗೂ ತಿಳಿಯುವಂತೆ ಮಾಡಲು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಮುಂದಾಗಿದೆ. ಅದಕ್ಕಾಗಿ ಶಾಲಾ ಪಠ್ಯಪುಸ್ತಕದಲ್ಲಿ ತುರ್ತುಪರಿಸ್ಥಿತಿಯ ಬಗೆಗಿನ ಪಾಠಗಳನ್ನು ಅಳವಡಿಸಲು ಚಿಂತನೆ ನಡೆಸಿದೆ.
ತುರ್ತು ಪರಿಸ್ಥತಿ ಒಂದು ‘ಕರಾಳ ಅವಧಿ’ ಎಂದು ಬಣ್ಣಿಸಿರುವ ಕೇಂದ್ರ ಎಚ್ಆರ್ಡಿ ಸಚಿವ ಪ್ರಕಾಶ್ ಜಾವ್ಡೇಕರ್ ಅವರು, ಶಾಲಾ ಪಠ್ಯದಲ್ಲಿ ಇದರ ಬಗ್ಗೆ ಪಾಠವನ್ನು ಅಳವಡಿಸುವ ನಿಟ್ಟಿನಲ್ಲಿ ಕಾರ್ಯ ಮಾಡಲಿದ್ದೇವೆ, ಈ ಕರಾಳ ಚರಿತ್ರೆಯ ಬಗ್ಗೆ ಮುಂಬರುವ ಪೀಳಿಗೆ ತಿಳಿದುಕೊಳ್ಳುವುದು ಅತ್ಯಗತ್ಯ’ ಎಂದಿದ್ದಾರೆ.
1975ರ ಜೂನ್ 25ರಂದು ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಈ ಮೂಲಕ ಜನರ ಸಂವಿಧಾನ ಬದ್ಧ ಹಕ್ಕುಗಳನ್ನು, ಪತ್ರಿಕಾ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.