ನವದೆಹಲಿ: ವಯಸ್ಸು, ಅನಾರೋಗ್ಯದ ಕಾರಣದಿಂದಾಗಿ ಪಡಿತರ ಅಂಗಡಿಗೆ ತೆರಳಿ, ಸರ್ಕಾರ ಕಡಿಮೆ ಬೆಲೆಯಲ್ಲಿ ನೀಡುವ ಆಹಾರಧಾನ್ಯಗಳನ್ನು ಪಡೆಯುವಷ್ಟು ಶಕ್ತಿ ಕೆಲ ಬಡವರಿಗೆ ಇರುವುದಿಲ್ಲ. ಇದರಿಂದಾಗಿ ಅವರು ಹಸಿವೆಯಲ್ಲೇ ದಿನ ಕಳೆಯಬೇಕಾಗುತ್ತದೆ. ಇದೀಗ ಇಂತಹವರ ನೆರವಿಗೆ ಧಾವಿಸಿದೆ ಕೇಂದ್ರ ಸರ್ಕಾರ .
ಹಸಿವಿನಿಂದ ಸಾಯುವ ಪರಿಸ್ಥಿತಿ ನಿರ್ಮಾಣವಾಗದಂತೆ ನೋಡಿಕೊಳ್ಳುವ ಸಲುವಾಗಿ ಅತೀಹೆಚ್ಚು ಸಬ್ಸಿಡಿ ದರಗಳಲ್ಲಿ ಸಿಗುವ ಆಹಾರ ಧಾನ್ಯಗಳನ್ನು ಸಾರ್ವಜನಿಕ ಹಂಚಿಕೆ ವ್ಯವಸ್ಥೆ(ಪಿಡಿಎಸ್)ಗೊಳಪಟ್ಟ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವಂತೆ ಕೇಂದ್ರ ರಾಜ್ಯಗಳಿಗೆ ಸಲಹೆ ನೀಡಿದೆ.
ಸಾರ್ವಜನಿಕ ಹಂಚಿಕೆ ವ್ಯವಸ್ಥೆಯ ಆಹಾರ ಧಾನ್ಯಗಳನ್ನು ಪಡೆಯಲು ಸಾಧ್ಯವಾಗದ ಹಿನ್ನಲೆಯಲ್ಲಿ ಹಸಿವಿನಿಂದ ಸಾಯುವಂತಹ ಪರಿಸ್ಥಿತಿಗಳು ಬರಬಾರದು. ಈ ಹಿನ್ನಲೆಯಲ್ಲಿ ಆಹಾರಧಾನ್ಯಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಆಹಾರ ಸಚಿವಾಲಯ ಹೇಳಿದೆ.
ತಮ್ಮ ರೇಷನ್ನನ್ನು 3 ತಿಂಗಳಿನಿಂದ ಪಡೆಯದವರ ಮೇಲೆ ಸರ್ಕಾರ ಕಣ್ಣಿಡಬೇಕು, ಕೆಲವರಿಗೆ ವಯಸ್ಸು, ಅನಾರೋಗ್ಯದ ಸಮಸ್ಯೆಯಿಂದಾಗಿ ರೇಷನ್ ಅಂಗಡಿಗೆ ಹೋಗಲು ಸಾಧ್ಯವಾಗದೇ ಇರಬಹುದು, ಇಂತಹ ಸಂದರ್ಭದಲ್ಲಿ ಹೋಮ್ ಡೆಲಿವರಿ ನೀಡಬೇಕು ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.