ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುತ್ತಿರುವ ರಾಷ್ಟ್ರಗಳ ಪಟ್ಟಿಗೆ ಪಾಕಿಸ್ಥಾನವನ್ನು ಸೇರ್ಪಡೆಗೊಳಿಸಿರುವ ಫಿನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್)ನ ಕ್ರಮವನ್ನು ಭಾರತ ಸ್ವಾಗತಿಸಿದೆ.
ಎಫ್ಎಟಿಎಫ್ನ ನಿರ್ಧಾರವನ್ನು ಭಾರತ ಶ್ಲಾಘಿಸಿದ್ದು, ಅಂತಾರಾಷ್ಟ್ರೀಯ ಸಮುದಾಯಕ್ಕೆ ಸವಾಲಾಗಿ ಪರಿಣಮಿಸಿರುವ, ವಿಶ್ವಸಂಸ್ಥೆಯಿಂದ ನಿಷೇಧಕ್ಕೊಳಗಾಗಿರುವ ಉಗ್ರರ ಹಣಕಾಸು ನೆರವನ್ನು ಹತ್ತಿಕ್ಕಲು ಪಾಕಿಸ್ಥಾನ ವಿಫಲವಾಗಿದೆ ಎಂದಿದೆ.
‘ಹಫೀಝ್ ಸೈಯದ್, ಜಮಾತ್ ಉದ್ ದಾವಾ, ಲಷ್ಕರ್, ಜೈಶೇ ಮುಂತಾದುವುಗಳ ಪಾಕಿಸ್ಥಾನದ ನೆಲೆದಲ್ಲಿ ಕಾರ್ಯಾಚರಣೆ ನಡೆಸುತ್ತಲೇ ಇದೆ’ ಎಂದಿದೆ.
ಅಲ್ಲದೇ ಜಾಗತಿಕ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡಾದರೂ ಪಾಕಿಸ್ಥಾನ ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳುತ್ತದೆ ಎಂಬ ಭರವಸೆ ಇದೆ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.