ನವದೆಹಲಿ: ವೇತನ ನೀಡದಿರುವುದನ್ನು ವಿರೋಧಿಸಿ ಕಳೆದ 10 ದಿನಗಳಿಂದ ದೆಲಿಯ ಸ್ವಚ್ಛತಾ ಕಾರ್ಮಿಕರು ತಮ್ಮ ಕಾರ್ಯವನ್ನು ಸ್ಥಗಿತಗೊಳಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಇದರ ಪರಿಣಾಮದಿಂದ ದೆಹಲಿಯ ಬೀದಿ ಬೀದಿಗಳು ಗಬ್ಬೆದ್ದು ನಾರುತ್ತಿವೆ.
ಸೋಮವಾರ ಕೇಜ್ರಿವಾಲ್ ನಿವಾಸದ ಮುಂದುಗಡೆಯೇ ನೂರಾರು ಕಾರ್ಮಿಕರು ಉಗ್ರ ರೀತಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ಈ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ರಾಮಲೀಲಾ ಮೈದಾನದಲ್ಲಿ ಕಾರ್ಮಿಕರೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ನಗರ ಪಾಲಿಕೆಯ ಅಧಿಕಾರಿಗಳೂ ಪಾಲ್ಗೊಳ್ಳಲಿದ್ದಾರೆ.
ಎರಡು ತಿಂಗಳ ಹಿಂದೆಯೇ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭೇಟಿಯಾಗಿದ್ದ ಸ್ವಚ್ಛತಾ ಕಾರ್ಮಿಕರು ತಮಗೆ ವೇತನ ಸಿಗುತ್ತಿಲ್ಲ ಎಂಬ ಬಗ್ಗೆ ಕಷ್ಟ ತೋಡಿಕೊಂಡಿದ್ದರು. ಆದರೂ ಈ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ.
ಇದೀಗ ಸಮಸ್ಯೆ ಉಲ್ಬಣಗೊಂಡಿದ್ದು ಕಾರ್ಮಿಕರು ಉಗ್ರ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಇದರಿಂದಾಗಿ ದೆಹಲಿ ಕಸದ ತೊಟ್ಟಿಯಾಗಿ ಪರಿವರ್ತನೆಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.