ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ನಲ್ಲಿ ದಾಖಲಾತಿ ಕಡಿಮೆ ಇರುವ 28,847 ಶಾಲೆಗಳನ್ನು ಹತ್ತಿರದಲ್ಲಿರುವ ಮತ್ತೊಂದು ಶಾಲೆಯೊಂದಿಗೆ ವಿಲೀನಗೊಳಿಸುವ ನಿರ್ಧಾರವನ್ನು ಪ್ರಕಟಿಸಲಾಗಿದೆ. ಈ ನಿರ್ಧಾರದಿಂದ ಸರ್ಕಾರಿ ಶಾಲೆಗಳ ಸಂಖ್ಯೆ 8,530ಕ್ಕೆ ಇಳಿಕೆಯಾಗಲಿದೆ.
ಸರ್ಕಾರದ ಈ ನಿರ್ಧಾರಕ್ಕೆ ಗ್ರಾಮೀಣ ಭಾಗದ ಮಕ್ಕಳ ಪೋಷಕರಿಂದ ಮತ್ತು ಶಿಕ್ಞಣ ತಜ್ಞರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಇದೊಂದು ಅವಾಸ್ತವಿಕ ಮತ್ತು ಅವೈಜ್ಞಾನಿಕ ನಿರ್ಧಾರ ಎಂದು ಹಲವಾರು ಶಿಕ್ಷಣ ತಜ್ಞರು ಕೂಡ ಅಭಿಪ್ರಾಯಪಟ್ಟಿದ್ದಾರೆ.
ವಿಲೀನ ಎನ್ನುವುದು ಒಂದು ಕೇವಲ ತಂತ್ರಗಾರಿಕ ಶಬ್ದವಷ್ಟೇ, ನಿಜವಾದ ಅರ್ಥದಲ್ಲಿ ಹೇಳಬೇಕೆಂದರೆ 28,847 ಶಾಲೆಗಳನ್ನು ಸರ್ಕಾರ ಮುಚ್ಚಲು ಹೊರಟಿದೆ. ಒಂದೂವರೆ ಕಿಲೋಮೀಟರ್ ದೂರದಲ್ಲಿರುವ ಮತ್ತೊಂದು ಶಾಲೆಯೊಂದಿಗೆ ಈ ಶಾಲೆಯನ್ನು ವಿಲೀನಗೊಳಿಸಿದರೆ, ಇಲ್ಲಿನ ವಿದ್ಯಾರ್ಥಿಗಳು ಶಿಕ್ಷಣ ಮುಂದುವರೆಸುವ ಆಸಕ್ತಿಯನ್ನೇ ಕಳೆದುಕೊಳ್ಳುವ ಆತಂಕವಿದೆ. ಅಲ್ಲದೇ ಪೋಷಕರು ಶಾಲೆ ದೂರವಾಗುತ್ತದೆ ಎಂಬ ಕಾರಣಕ್ಕೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟೂ ಹಾಕಬಹುದು.
ಖಾಸಗಿ ಶಾಲೆಗಳ ಲಾಬಿಗೆ ಮಣಿದು ಸರ್ಕಾರ ಇಂತಹ ನಿರ್ಧಾರವನ್ನು ತೆಗೆದುಕೊಂಡಿದೆಯೇ ಎಂಬ ಅನುಮಾನಗಳು ಕೂಡ ಮೂಡಿವೆ. ನಗರದ ಮಕ್ಕಳಿಗೆ ಸರ್ಕಾರಿ ಶಾಲೆ ಅಷ್ಟೊಂದು ಮುಖ್ಯವಲ್ಲ, ಆದರೆ ಇಂದಿಗೂ ಗ್ರಾಮೀಣ ಮಕ್ಕಳಿಗೆ ಸರ್ಕಾರಿ ಶಾಲೆಗಳೇ ಜೀವಾಳ ಎಂಬುದನ್ನು ಸರ್ಕಾರ ಮರಿಯಬಾರದು. ಶಾಲೆಗಳ ಗುಣಮಟ್ಟವನ್ನು ಏರಿಸಿ ಆ ಶಾಲೆಯತ್ತ ಮಕ್ಕಳನ್ನು ಆಕರ್ಷಿಸಬೇಕಾದ ಹೊಣೆ ಸರ್ಕಾರದ್ದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.