ನವದೆಹಲಿ: ಭಾರತ ಪ್ರವಾಸದಲ್ಲಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಅವರಿಗೆ ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತವನ್ನು ನೀಡಲಾಯಿತು. ಮೂನ್ ಮತ್ತು ಅವರ ಪತ್ನಿ ಕಿಮ್ ಜುಂಗ್ ಸೂಕ್ ಅವರು ಗಾರ್ಡ್ ಆಫ್ ಹಾನರ್ನ್ನು ಪಡೆದುಕೊಂಡರು.
ಬಳಿಕ ದಕ್ಷಿಣ ಕೊರಿಯಾ ಅಧ್ಯಕ್ಷರು ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಉನ್ನತ ಶ್ರೇಣಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇಂದು ಮೂನ್ ಅವರು ಹೈದರಾಬಾದ್ ಹೌಸ್ನಲ್ಲಿ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಲಿದ್ದಾರೆ, ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ.
ಸೋಮವಾರ ಮೋದಿ ಮತ್ತು ಮೂನ್ ನೊಯ್ಡಾದಲ್ಲಿ ವಿಶ್ವದ ಅತೀದೊಡ್ಡ ಸೆಲ್ಫೋನ್ ತಯಾರಿಕ ಘಟಕವನ್ನು ಉದ್ಘಾಟನೆಗೊಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.