ಐಝಾಲ್: ಮಿಜೋರಾಂನ ಐಝಾಲ್ ವಿಶ್ವವಿದ್ಯಾಲಯದಲ್ಲಿ ದೇಶದ ಪ್ರಥಮ ವಿಕಲಚೇತನ ಅಧ್ಯಯನ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಡಿಯ ವಿಕಲಚೇತನ ವ್ಯಕ್ತಿ ಇಲಾಖೆ ವತಿಯಿಂದ ಈ ಕೇಂದ್ರವನ್ನು ಸ್ಥಾಪನೆ ಮಾಡಲಾಗಿದೆ.
ಈ ವಿಕಲಚೇತನ ಅಧ್ಯಯನ ಕೇಂದ್ರಕ್ಕೆ ಕಳೆದ ವಾರವೇ ಮಿಜೋರಾಂ ಮುಖ್ಯಮಂತ್ರಿ ಲಾಲ್ ಥನ್ಹಾವ್ಲಾ ಚಾಲನೆ ನೀಡಿದ್ದಾರೆ. ಇಲ್ಲಿ ಎರಡು ವಾರಗಳ ಶಾರ್ಟ್ ಟರ್ಮ್ ಕೋರ್ಸುಗಳನ್ನು ನೀಡಲಾಗುತ್ತದೆ. ಅಲ್ಲದೇ ವಿಕಲಚೇತನರಿಗೆ ಸಂಬಂಧಿಸಿದ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆಯಬಹುದು. ವಿವಿಧ ಸಂಶೋಧನೆಗಳನ್ನು ಹಮ್ಮಿಕೊಳ್ಳಬಹುದಾಗಿದೆ.
ವಿಕಲಚೇತನರಿಗೆ ಸಮಾನ ಅವಕಾಶಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಈ ಕೇಂದ್ರ ಕಾರ್ಯೋನ್ಮುಖವಾಗಲಿದೆ ಎಂದು ಲಾಲ್ ಥನ್ಹಾವ್ಲಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.