ನವದೆಹಲಿ: ಮುಂದಿನ ವರ್ಷದ ಗಣರಾಜ್ಯೋತ್ಸವ ಸಮಾರಂಭಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರತ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಿದೆ.
ನರೇಂದ್ರ ಮೋದಿ ಸರ್ಕಾರ ಕಳುಹಿಸಿರುವ ಆಹ್ವಾನಕ್ಕೆ ಅಮೆರಿಕಾ ಇನ್ನಷ್ಟೇ ಅಧಿಕೃತ ಸ್ಪಂದನೆಯನ್ನು ನೀಡಬೇಕಾಗಿದೆ. ಆದರೆ ಮೂಲಗಳ ಪ್ರಕಾರ, ಟ್ರಂಪ್ ಆಡಳಿತ ಈ ಬಗ್ಗೆ ಸಕಾರಾತ್ಮಕವಾಗಿಯೇ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ವ್ಯಾಪಾರ ಸುಂಕ, ಇರಾನ್ನೊಂದಿಗಿನ ಭಾರತದ ಬಾಂಧವ್ಯ, ರಷ್ಯಾದಿಂದ ಎಸ್-1400 ಕ್ಷಿಪಣಿ ವ್ಯವಸ್ಥೆ ಖರೀದಿಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳು ತಲೆದೋರಿರುವ ಈ ಸಂದರ್ಭದಲ್ಲೇ ಭಾರತ ಆಹ್ವಾನ ಕಳುಹಿಸಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.
ಒಂದು ವೇಳೆ ಆಹ್ವಾನವನ್ನು ಟ್ರಂಪ್ ಒಪ್ಪಿಕೊಂಡರೆ ಉಭಯ ದೇಶಗಳ ನಡುವಣ ಬಾಂಧವ್ಯ ಮತ್ತೆ ಬಲಗೊಳ್ಳಲಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.