ಬೆಂಗಳೂರು: ತನ್ನ ಎಲೆಕ್ಟ್ರಿಕ್ ವೆಹ್ಹಿಕಲ್ ಬ್ಯಾಟರಿ ತಂತ್ರಜ್ಞಾನವನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ವೇಗಗೊಳಿಸುವ ಸಲುವಾಗಿ, ತಿರುವನಂಪತಪುರಂನಲ್ಲಿನ ಇಸ್ರೋದ ವಿಕ್ರಮ್ ಸಾರಾಭಾಯ್ ಸ್ಪೇಸ್ ಸೆಂಟರ್ ಮಂಗಳವಾರ 137 ಕಂಪನಿಗಳಿಗೆ ಪೂರ್ವ ಅರ್ಜಿ ವಿಚಾರಸಂಕಿರಣವನ್ನು ಆಯೋಜನೆಗೊಳಿಸಿತ್ತು.
ಈ 137 ಕಂಪನಿಗಳು ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಈಥಿಯಂ ಐಯಾನ್ ಬ್ಯಾಟರಿಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ತೋರಿಸಿದೆ.
ಬ್ಯಾಟರಿ ತಂತ್ರಜ್ಞಾನದಲ್ಲಿ ಆಸಕ್ತಿ ತೋರಿಸಿರುವ ಈ ಕಂಪನಿಗಳಿಗೆ ಹೆಚ್ಚಿನ ಮಾಹಿತಿಯನ್ನು ಒದಗಿಸುವ ಸಲುವಾಗಿ, ಈ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿತ್ತು. ಈ ಕಂಪನಿಗಳು ಅರ್ಜಿ ಸಲ್ಲಿಸುವುದಕ್ಕೂ ಮುನ್ನ ತಂತ್ರಜ್ಞಾನದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಿ ಎಂಬುದು ಇದರ ಉದ್ದೇಶವಾಗಿದೆ.
ವಿಚಾರಸಂಕಿರಣದಲ್ಲಿ ಪಾಲ್ಗೊಂಡ ಬಳಿಕವೂ ಈ ಬ್ಯಾಟರಿ ತಂತ್ರಜ್ಞಾನವನ್ನು ಅಳವಡಿಸಲು ಈ ಸಂಸ್ಥೆಗಳು ಉತ್ಸುಹುಕತೆ ತೋರಿಸಿದರೆ, ಸಮೂಹಿಕವಾಗಿ ಬ್ಯಾಟರಿ ಉತ್ಪಾದನೆ ಮಾಡಲು ರೂ.4 ಲಕ್ಷ ಡಿಪೋಸಿಟ್ ಮತ್ತು ದಾಖಲೆಗಳನ್ನು ಈ ಕಂಪನಿಗಳು ಇಸ್ರೋಗೆ ನೀಡಬೇಕಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.