ನವದೆಹಲಿ: ರಾಜ್ಯಸಭಾದ ಮೊದಲ ದಿನದ ಕಲಾಪ ಯಶಸ್ವಿಯಾಗಿದ್ದು, ಎರಡು ಮಸೂದೆಗಳನ್ನು ಅಂಗೀಕಾರಗೊಳಿಸಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನ ಬುಧವಾರದಿಂದ ಆರಂಭಗೊಂಡಿದೆ.
ಆರು ಸಬ್ಸಿಡರಿ ಬ್ಯಾಂಕುಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ವಿಲೀನಗೊಳಿಸುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಮತ್ತೊಂದು ಮಸೂದೆ ಸಾರ್ವಜನಿಕ ಕಾರಣಕ್ಕಾಗಿ ಸ್ಥಿರಾಸ್ತಿಗಳನ್ನು ಪಡೆದುಕೊಳ್ಳುವುದಕ್ಕೆ ಸಂಬಂಧಿಸಿದ್ದಾಗಿದೆ.
ಈ ಸಲದ ಅಧಿವೇಶನ ಅತ್ಯಂತ ಸಾಕಾರತ್ಮಕವಾಗಿ ನಡೆಯಲಿದೆ ಎಂಬ ಭರವಸೆಯನ್ನು ಮೂಡಿಸಿದೆ ಎಂದು ಸಭಾಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ತೆಲುಗು ದೇಶಂ ಪಕ್ಷದ ಸದಸ್ಯರು ಕಲಾಪಕ್ಕೆ ತೀವ್ರ ಅಡ್ಡಿಪಡಿಸುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಜರಗಿಸುವುದಾಗಿ ನಾಯ್ಡು ಎಚ್ಚರಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.