ನವದೆಹಲಿ: ಪ್ರವಾಸೋದ್ಯಮಕ್ಕೆ ಭಾರತದಲ್ಲಿ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಚ್ಚಿನ ಅವಕಾಶಗಳಿವೆ ಎಂದು ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ಸುಮನ್ ಬಿಲ್ಲಾ ಪ್ರತಿಪಾದಿಸಿದ್ದು, 2017ರಲ್ಲಿ ಭಾರತ 10 ಮಿಲಿಯನ್ ವಿದೇಶಿ ಪ್ರವಾಸಿಗರನ್ನು ಕಂಡಿದೆ ಎಂದು ತಿಳಿಸಿದರು.
ಮಾತ್ರವಲ್ಲ 2018ರಲ್ಲಿ ಭಾರತದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಪ್ರಗತಿ ಅಭೂತಪೂರ್ವವಾಗಿದ್ದು, ಈಗಾಗಲೇ ವಿದೇಶಿ ಪ್ರವಾಸಿಗರ ಸಂಖ್ಯೆ 16 ಮಿಲಿಯನ್ಗೆ ಏರಿಕೆಯಾಗಿದ್ದು, ಶೇ.15.8ರಷ್ಟು ಬೆಳವಣಿಗೆಯನ್ನು ಕಂಡಿದೆ ಎಂದಿದ್ದಾರೆ.
ಪ್ರವಾಸೋದ್ಯಮಕ್ಕೆ ರಾಜಸ್ಥಾನ ಸರ್ಕಾರದ ಸಾಧನೆಯನ್ನು ಕೊಂಡಾಡಿರುವ ಅವರು, ಕಳೆದ ಎರಡು ವರ್ಷಗಳಿಂದ ಅಲ್ಲಿನ ಸರ್ಕಾರ ನಡೆಸುತ್ತಿರುವ ಪ್ರಬಲ ಪ್ರವಾಸೋದ್ಯಮ ಪ್ರಚಾರದಿಂದಾಗಿ ಅಲ್ಲಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ದುಪ್ಪಟ್ಟಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.