ಕಂಪಾಲಾ: ಉಗಾಂಡಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಅಧ್ಯಕ್ಷ ಯೊವೆರಿ ಮುಸೆವೆನಿ ಜೊತೆಗೂಡಿ ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಾಯ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು.
ಕಂಪಾಲಾದಲ್ಲಿ ನಡೆದ ಭಾರತೀಯ ಸಮುದಾಯದ ಕಾರ್ಯಕ್ರಮದ ಸಂದರ್ಭದಲ್ಲಿ, ಲೋಹ ಪುರುಷ ಸರ್ದಾರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.
ಈ ಬಗ್ಗೆ ಟ್ವಿಟರ್ನಲ್ಲಿ ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಅವರು, ‘ಪ್ರಧಾನಿ ನರೇಂದ್ರ ಮೋದಿ ಮತ್ತು ಉಗಾಂಡಾ ಅಧ್ಯಕ್ಷ ಯೊವೆರಿ ಮುಸೆವೆನಿ ಅವರು, ಭಾರತೀಯ ಸಮುದಾಯದ ಸಮಾರಂಭದಲ್ಲಿ ಲೋಹ ಪುರುಷನ ಪುತ್ಥಳಿ ಅನಾವರಣಗೊಳಿಸಿ ಗೌರವಾರ್ಪನೆ ಮಾಡಿದರು’ ಎಂದಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಉಗಾಂಡಾದ ಪ್ರಗತಿ ಭಾರತೀಯ ಸಮುದಾಯ ನೀಡಿರುವ ಕೊಡುಗೆಯನ್ನು ಯೊವೆರಿ ಮುಕ್ತ ಕಂಠದಿಂದ ಶ್ಲಾಘನೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.