ಮಂಗಳೂರು : ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಜಾಗೃತಿ ಮೂಡಿಸುವ ಸಲುವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸೆಲ್ಫಿ ವಿತ್ ಕ್ಯಾಂಪಸ್ ಅಭಿಯಾನ ನಡೆಸುತ್ತಿದೆ. ಅದರ ಭಾಗವಾಗಿ ಎಬಿವಿಪಿ ಮಂಗಳೂರು ವತಿಯಿಂದ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸೆಲ್ಫಿ ವಿತ್ ಡ್ರಗ್ಸ್ ಫ್ರೀ ಕ್ಯಾಂಪಸ್ (Selfie With Drug Free Campus) ಅಭಿಯಾನ ಕೂಡ ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಎಬಿವಿಪಿಯಿಂದ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಗುವುದು. ಜುಲೈ 30 ರಿಂದ 04 ಆಗಸ್ಟ್ 2018 ರವರೆಗೆ 6 ದಿನಗಳ ಕಾಲ ಈ ಅಭಿಯಾನ ನಡೆಸಲಾಗುತ್ತಿದೆ.
ಶಿಕ್ಷಣ ಮತ್ತು ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ದೇಶದಲ್ಲಿ ಹೆಸರು ಮಾಡಿರುವ ಮಂಗಳೂರು ಇತ್ತಿಚಿನ ದಿನಗಳಲ್ಲಿ ಮಂಗಳೂರು ನಗರ ಹಾಗೂ ಜಿಲ್ಲೆಯ ಇತರೆ ಭಾಗಗಳ ಕಾಲೇಜು ಕ್ಯಾಂಪಸ್ಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದೆ. ಎಲ್ಲಾ ವರ್ಗದ ವಿದ್ಯಾರ್ಥಿಗಳು, ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಡ್ರಗ್ಸ್ಗೆ ದಾಸರಾಗುತ್ತಿದ್ದು. ನಮ್ಮ ಸರ್ಕಾರಗಳು ಮಾದಕ ವ್ಯಸನದ ಭೂಗತ ದೊರೆಗಳ(ಡ್ರಗ್ ಮಾಫಿಯಾ) ವಿರುದ್ದ ಯಾವದೇ ಕಠಿಣ ಕ್ರಮ ಕೈಗೊಳ್ಳದಿರುವುದು, ದೇಶದ ಭವಿಷ್ಯತ್ತಿಗೆ ಸವಾಲಾಗುತ್ತಿದೆ. ಎಬಿವಿಪಿಯು ಮಂಗಳೂರಿನಲ್ಲಿರುವ ಕಾಲೇಜು ವಿದ್ಯಾರ್ಥಿಗಳೊಂದಿಗೆ ಕ್ಯಾಂಪಸ್ಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಮೂಲಕ ಅಲ್ಲಿನ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಳೆದ 69 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲಿ ಕಾರ್ಯನಿರ್ವಹಿಸುತ್ತಿದೆ. ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇಂದಿನ ವಿದ್ಯಾರ್ಥಿ- ಇಂದಿನ ಪ್ರಜೆಯೆಂಬ ಕಲ್ಪನೆಯೊಂದಿಗೆ ಕಾಲೇಜು ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿ ನಾಯಕತ್ವವನ್ನು ನೀಡುತ್ತಿದೆ. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಪ್ರಯತ್ನ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಶೈಕ್ಷಣಿಕ, ಸಾಮಾಜಿಕ ಮತ್ತು ರಾಷ್ಟ್ರೀಯ ಸಮಸ್ಯೆಗಳ ವಿರುದ್ಧ ನಿರಂತರವಾದ ಯಶಸ್ವಿ ಹೋರಾಟಗಳನ ಕಟ್ಟಿ ವಿದ್ಯಾರ್ಥಿಗಳ ನಡುವೆ ಜಾಗೃತಿ ಮೂಡಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.