ನವದೆಹಲಿ: ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ 2015-16ರಿಂದ 2017-18ರವರೆಗೆ ಸುಮಾರು 3.49 ಕೋಟಿ ಹೊಸ ಉದ್ಯಮಿಗಳು ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಅವರು ರಾಜ್ಯಸಭೆಗೆ ಮಾಹಿತಿಯನ್ನು ನೀಡಿದ್ದು, 2015-16 ರಿಂದ 2017-18ರ ಸಾಲಿನಲ್ಲಿ ಒಟ್ಟು 12.27 ಕೋಟಿ ಸಂಖ್ಯೆಯ ಸಾಲವನ್ನು ವಿತರಣೆ ಮಾಡಲಾಗಿದೆ, ಇದರಲ್ಲಿ 3.29ಕೋಟಿ ಮಂದಿ ಹೊಸ ಉದ್ಯಮಿಗಳು ಎಂದಿದ್ದಾರೆ.
ಸಣ್ಣ ಉದ್ಯಮಿಗಳಿಗೆ, ವ್ಯಕ್ತಿಗಳಿಗೆ ಹೊಸ ಉದ್ಯಮವನ್ನು ಆರಂಭಿಸಲು ಅಥವಾ ತಮ್ಮ ಉದ್ಯಮವನ್ನು ವಿಸ್ತರಣೆಗೊಳಿಸಲು ಸಾಲ ನೀಡುವ ಯೋಜನೆಯೇ ಪ್ರಧಾನ ಮಂತ್ರಿ ಮುದ್ರಾ ಯೋಜನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.