ನವದೆಹಲಿ: ಅಸ್ಸಾಂನಲ್ಲಿ ನಡೆಯುತ್ತಿರುವ ಪೌರತ್ವ ದಾಖಲೀಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳ ವಿರುದ್ಧ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಸ್ಸಾಂನ ನ್ಯಾಷನಲ್ ರಿಜಿಸ್ಟ್ರಿ ಆಫ್ ಸಿಟಿಜನ್ಸ್ ವರದಿಯ ವಿರುದ್ಧ ಪ್ರತಿಪಕ್ಷಗಳು ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವುದು ದುರಾದೃಷ್ಟಕರ’ ಎಂದಿದ್ದಾರೆ.
ಅಸ್ಸಾಂನಲ್ಲಿನ ಯಾವೊಬ್ಬ ಭಾರತೀಯರನ್ನೂ ನಾವೂ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸುಪ್ರೀಂಕೋರ್ಟ್ ಪರಿಶೀಲನೆಯಲ್ಲಿಯೇ ವರದಿ ಸಿದ್ಧವಾಗುತ್ತಿದೆ ಎಂಬುದನ್ನು ಪ್ರತಿಪಕ್ಷಗಳು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.
ಈಗ ಕೇವಲ ಕರಡು ವರದಿಯನ್ನು ಸಿದ್ಧಪಡಿಸಲಾಗಿದೆ, ಇದು ಅಂತಿಮ ಪಟ್ಟಿಯಲ್ಲ ಎಂಬುದನ್ನು ಮತ್ತೊಮ್ಮೆ ಪುನರುಚ್ಚರಿಸುತ್ತೇನೆ, ಪ್ರತಿಯೊಬ್ಬರಿಗೂ ತಮ್ಮ ಪೌರತ್ವ ಸಾಬೀತುಪಡಿಸಲು ಅವಕಾಶ ಸಿಗಲಿದೆ, ನ್ಯಾಯಸಮ್ಮತವಾಗಿಯೇ ಪ್ರಕ್ರಿಯೆಗಳು ಜರುಗುತ್ತಿವೆ ಎಂದಿದ್ದಾರೆ.
ಯಾವುದೇ ಸ್ಥಿತಿಯಲ್ಲೂ ಯಾರ ವಿರುದ್ಧವೂ ಕ್ರಮ ಜರುಗಿಸಲಾಗುವುದಿಲ್ಲ, ಆದರೂ ಭಯದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ಖಂಡನಾರ್ಹ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.