ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಕಲ್ಲಿದ್ದಲು, ಇಂಧನ, ನವೀಕರಿಸಬಹುದಾದ ಶಕ್ತಿ, ನೈಸರ್ಗಿಕ ಅನಿಲ ವಲಯಗಳಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ್ದಾರೆ.
ಎರಡು ಗಂಟೆಗಳ ಕಾಲ ಮೂಲಸೌಕರ್ಯ ಸಂಬಂಧಿತ ಸಚಿವಾಲಯದ ಅಧಿಕಾರಿಗಳು, ನೀತಿ ಆಯೋಗದ ಸದಸ್ಯರು ಮತ್ತು ಪ್ರಧಾನಿ ಸಚಿವಾಲಯದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮೋದಿ, ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ಸೌರಶಕ್ತಿ ಸಾಮರ್ಥ್ಯಗಳು ರೈತರನ್ನು ತಲುಪುವಂತೆ ನೋಡಿಕೊಳ್ಳಬೇಕು, ಸೋಲಾರ್ ಪಂಪ್, ಸೋಲಾರ್ ಕುಕ್ಕಿಂಗ್ ಸೊಲ್ಯೂಷನ್ಗಳು ಸಾಮಾನ್ಯ ಜನರಿಗೆ ಎಟಕುವಂತೆ ನೋಡಿಕೊಳ್ಳಬೇಕು ಎಂದು ಈ ವೇಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಶ್ವಬ್ಯಾಂಕ್ನ ‘ಸುಲಲಿತವಾಗಿ ವಿದ್ಯುತ್ ಪಡೆಯುವ ಸೂಚ್ಯಾಂಕ’ದಲ್ಲಿ ಭಾರತ ತನ್ನ ರ್ಯಾಂಕಿಂಗ್ನ್ನು ಉತ್ತಮಪಡಿಸಿಕೊಂಡಿದೆ. 2014ರಲ್ಲಿ 99 ಇದ್ದ ರ್ಯಾಂಕಿಂಗ್, ಈಗ 26 ಇದೆ. ಪ್ರಧಾನಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜನಾದ ಮೂಲಕ ಪ್ರತಿ ಮನೆಗೂ ವಿದ್ಯುತ್ ಪೂರೈಕೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.