ನ್ಯೂಯಾರ್ಕ್: ಅಮೇರಿಕ ಮೂಲದ ತಂತ್ರಜ್ಞಾನ ಕಂಪೆನಿ ಸಿಸ್ಕೋದಲ್ಲಿ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಮಹಿಳೆ ಪದ್ಮಶ್ರೀ ವಾರಿಯರ್ ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ.
ಅವರು ಸೆಪ್ಟೆಂಬರ್ವರೆಗೆ ಕಂಪೆನಿಯ ಸಲಹೆಗಾರ್ತಿಯಾಗಿ ಕಾರ್ಯ ಮುಂದುವರೆಸಲಿದ್ದಾರೆ. ಕಂಪೆನಿಯ ಉನ್ನತ ಹುದ್ದೆಗಳ ಪುನರ್ರಚನೆಯಿಂದಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಕಂಪೆನಿಯ ಮೂಲಗಳು ತಿಳಿಸಿವೆ.
ಇನ್ನು ಮುಂದೆ ಅವರು ತಂತ್ರಜ್ಞಾನ, ವ್ಯಾಪಾರ ವಿಸ್ತರಣೆ ಕುರಿತು ಕಂಪೆನಿಗೆ ಸಲಹೆ-ಸೂಚನೆ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.