ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಪ್ರಯೋಜನವನ್ನು ದೇಶದ 31 ಲಕ್ಷ ಗರ್ಭಿಣಿಯರು ಮತ್ತು ಬಾಣಂತಿಯರು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಹೇಳಿದೆ.
‘ಮಾತೃತ್ವದ ಪ್ರಯೋಜನಗಳನ್ನು ಪಡೆದುಕೊಳ್ಳುವ ಸಲುವಾಗಿ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗೆ 2017-18ರ ಸಾಲಿನ ಹಣಕಾಸು ವರ್ಷದಲ್ಲಿ ಸುಮಾರು 31 ಲಕ್ಷ ಪಲಾನುಭವಿಗಳು ನೋಂದಾವಣೆ ಮಾಡಿಕೊಂಡಿದ್ದಾರೆ’ ಎಂದಿದ್ದಾರೆ.
ಈ ಯೋಜನೆಯಡಿ ಗರ್ಭಿಣಿಯರಿಗೆ ರೂ.5 ಸಾವಿರ ಹಣಕಾಸು ನೆರವು ಮತ್ತು ಬಾಣಂತಿಯರಿಗೆ ಜನನಿ ಸುರಕ್ಷಾ ಯೋಜನೆಯಡಿ ರೂ.1000 ಹಣಕಾಸು ನೆರವು ಸಿಗಲಿದೆ.
ಗರ್ಭಿಣಿಯರು ಮತ್ತು ಬಾಣಂತಿಯರು ವಿಶ್ರಾಂತಿ ಪಡೆಯಲಿ, ಸೂಕ್ತ ಆಹಾರಗಳನ್ನು ಸೇವಿಸಲಿ ಎಂಬ ಸುದ್ದೇಶದೊಂದಿಗೆ ಈ ನೆರವನ್ನು ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.