ನವದೆಹಲಿ: ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ದೇಶದಾದ್ಯಂತ 774 ಮಂದಿ ಮೃತಪಟ್ಟಿದ್ದಾರೆ, 7 ರಾಜ್ಯಗಳ ಪ್ರವಾಹ ಪರಿಸ್ಥಿತಿಯನ್ನು ಎದುರಿಸಿವೆ ಎಂದು ಕೇಂದ್ರ ಗೃಹಸಚಿವಾಲಯ ತಿಳಿಸಿದೆ.
ಗೃಹಸಚಿವಾಲಯದ ರಾಷ್ಟ್ರೀಯ ತುರ್ತು ಸ್ಪಂದನಾ ಕೇಂದ್ರದ ವರದಿಯ ಪ್ರಕಾರ, ಕೇರಳದಲ್ಲಿ 187, ಉತ್ತರಪ್ರದೇಶದಲ್ಲಿ 171, ಪಶ್ಚಿಮಬಂಗಾಳದಲ್ಲಿ 170, ಮಹಾರಾಷ್ಟ್ರದಲ್ಲಿ 139, ಗುಜರಾತ್ನಲ್ಲಿ 52, ಅಸ್ಸಾಂನಲ್ಲಿ 45, ನಾಗಾಲ್ಯಾಂಡ್ನಲ್ಲಿ 8 ಮಂದಿ ಮಳೆಯ ಕಾರಣದಿಂದ ಸಾವನ್ನಪ್ಪಿದ್ದಾರೆ.
ಮಳೆಯಿಂದಾಗಿ ದೇಶದಾದ್ಯಂತ 245 ಮಂದಿ ಗಾಯಗೊಂಡಿದ್ದಾರೆ, 27 ಮಂದಿ ನಾಪತ್ತೆಯಾಗಿದ್ದಾರೆ. ಕೇರಳದಲ್ಲಿ 23 ಮಂದಿ ಮತ್ತು ಪಶ್ಚಿಮಬಂಗಾಳದಲ್ಲಿ 5 ಮಂದಿ ನಾಪತ್ತೆಯಾಗಿದ್ದಾರೆ.
ಉತ್ತರಪ್ರದೇಶ, ಹಿಮಾಚಲಪ್ರದೇಶ, ಉತ್ತರಾಖಂಡ, ಕೇರಳ, ಕರ್ನಾಟಕ, ತಮಿಳುನಾಡು, ಪಶ್ಚಿಮಬಂಗಾಳ, ಅಸ್ಸಾಂ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆಯೂ ಎಚ್ಚರಿಕೆಯನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.