ಬಂಟ್ವಾಳ: ಅ. 29 ರಂದು ನಡೆಯುವ ಸ್ಥಳೀಯ ಚುನಾವಣೆಯಲ್ಲಿ ಎಲ್ಲಾ ಕ್ಷೇತಗಳಲ್ಲಿಯೂ ಭಾರತೀಯ ಜನತಾಪಾರ್ಟಿಯ ಅತ್ಯಂತ ಸಮರ್ಥ ಮತ್ತು ಪ್ರಭಾವಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ ಹಾಗೂ ಸ್ಪಷ್ಟ ಬಹುಮತ ಪಡೆಯುತ್ತದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಬಿ.ಸಿ.ರೋಡಿನ ಪಕ್ಷದ ಕಚೇರಿಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು. ಶಾಸಕರ ಪರಿಶ್ರಮ ಹಾಗೂ ಬಿಜೆಪಿ ಪಕ್ಷದ ಸಂಘಟನೆಯ ಮೂಲಕ ಈ ಬಾರಿ ಬಂಟ್ವಾಳ ಪುರಸಭೆಯ ಚುನಾವಣೆಯಲ್ಲಿ ಅತ್ಯಧಿಕ ಅಭ್ಯರ್ಥಿಗಳು ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಕಾಂಗ್ರೇಸ್ ಪಕ್ಷ ಅತ್ಯಂತ ಕೆಟ್ಟದಾಗಿ ಆಡಳಿತ ನಡೆಸಿದ್ದಾರೆ ಎಂದು ಆರೋಪಿಸಿದರು. ಅಸಮರ್ಪಕ ತ್ಯಾಜ್ಯ ನಿರ್ವಹಣೆ , ಚರಂಡಿ ಅವ್ಯವಸ್ಥೆಯಿಂದ ಪುರಸಭಾ ನಿವಾಸಿಗಳು ಬೆಸೆತ್ತು ಹೋಗಿದ್ದಾರೆ. ಹಾಗಾಗಿ ಈ ಬಂಟ್ವಾಳ ಪುರಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸಮರ್ಥ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಪುರಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರು ಪುರಸಭಾ ಚುನಾವಣೆಯಲ್ಲಿ ಯೋಚಿಸಿ ಬಿಜೆಪಿ ಬೆಂಬಲಿಸಿ ಎಂದು ಅವರು ಮನವಿ ಮಾಡಿದರು.
ಜಿಲ್ಲಾಧಿಕಾರಿಗೆ ಆಗ್ರಹ:
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ರಾಜಕಾರಣ ಚಟುವಟಿಕೆ ನೋಡುವಾಗ ಆಶ್ಚರ್ಯವಾಗುತ್ತೆ ಎಂದರು. ಪ್ರತಿ ಕ್ಷೇತ್ರದಲ್ಲಿ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ ಆದರೆ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಹಕ್ಕು ಪತ್ರ ವಿತರಣೆ ಮಾಡದಂತೆ ಜಿಲ್ಲಾಧಿಕಾರಿ ತಡೆ ಹಿಡಿಯಲು ಆದೇಶ ಮಾಡಿರುವುದು ಯಾವ ನ್ಯಾಯ ಎಂದರು.
ಹಕ್ಕು ಪತ್ರ ವಿತರಣೆ ಮಾಡದಂತೆ ತಡೆ ಹಿಡಿಯುವ ಮೂಲಕ ಜಿಲ್ಲಾಧಿಕಾರಿ ಅವರು ಶಾಸಕರ ಹಕ್ಕು ಚ್ಯುತಿ ಮಾಡಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ. ಶೀಘ್ರವಾಗಿ ಜಿಲ್ಲಾಧಿಕಾರಿಯವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಕ್ಕು ಪತ್ರ ವಿತರಣೆ ಮಾಡುವ ಕೆಲಸ ಮಾಡಬೇಕಾಗಿದೆ.
ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು, ಪ್ರಮುಖರಾದ ಸುಲೋಚನ ಜಿ.ಕೆ ಭಟ್. ದೇವದಾಸ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.