ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ವಿಶ್ವದ ಅತೀದೊಡ್ಡ ಆರೋಗ್ಯ ಯೋಜನೆ ‘ಆಯುಷ್ಮಾನ್ ಭಾರತ್’ನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ.
ಸೆ.25ರ ಬಳಿಕ ದೇಶದ ಆಯ್ದ ಜಿಲ್ಲಾಸ್ಪತ್ರೆಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಮೂಲಗಳು ತಿಳಿಸಿವೆ.
ಈ ವರ್ಷದ ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರ ‘ರಾಷ್ಟ್ರೀಯ ಆರೋಗ್ಯ ಯೋಜನೆ’ಯನ್ನು ತರುವುದಾಗಿ ಘೋಷಣೆ ಮಾಡಿತ್ತು. ಇದಕ್ಕೆ ‘ಆಯುಷ್ಮಾನ್ ಭಾರತ್’ ಎಂದು ಹೆಸರಿಸಲಾಗಿತ್ತು. ಇದನ್ನು ‘ಮೋದಿಕೇರ್’ ಎಂದೂ ಕರೆಯಲಾಗುತ್ತದೆ.
10 ಕೋಟಿ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ಆರೋಗ್ಯ ವಿಮೆ ನೀಡುವ ಯೋಜನೆ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.