ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಾನವ ಸಹಿತ ಬಾಹ್ಯಾಕಾಶ ಯೋಜನೆಯ ಕನಸನ್ನು ಸಾಕಾರಗೊಳಿಸಲು ನಾವು ಪ್ರಯತ್ನ ನಡೆಸುತ್ತೇವೆ ಎಂದು ಇಸ್ರೋ ಮುಖ್ಯಸ್ಥ ಕೆ.ಸಿವನ್ ಹೇಳಿದ್ದಾರೆ.
ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾನವ ಸಹಿತ ಬಾಹ್ಯಾಕಾಶ ಯೋಜನೆಯನ್ನು ಘೋಷಣೆ ಮಾಡಿದ್ದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿವನ್, ಮೋದಿಯವರ ಘೋಷಣೆ ನಮಗೆ ದೊಡ್ಡ ಸರ್ಪ್ರೈಸ್ ಆಗಿದ್ದು, ನಾವು ನಿರೀಕ್ಷೆಯೇ ಮಾಡಿರಲಿಲ್ಲ, ಈ ಯೋಜನೆಯ ಘೋಷಣೆ ನಮಗೆ ಗಿಫ್ಟ್ ಕೂಡ ಆಗಿದೆ, ಖಂಡಿತ ಈ ನಿಟ್ಟಿನಲ್ಲಿ ನಾವು ಪ್ರಯತ್ನ ನಡೆಸುತ್ತೇವೆ, ಮುಂದಿನ ನಾಲ್ಕು ವರ್ಷಗಳಲ್ಲಿ ಭಾರತ ಬಾಹ್ಯಾಕಾಶಕ್ಕೆ ಗಗನಯಾತ್ರಿಕರನ್ನು ಕಳುಹಿಸಲು ಯಶಸ್ವಿಯಾಗಲಿದೆ ಎಂದಿದ್ದಾರೆ.
ಮೊದಲು ಈ ಯೋಜನೆಗೆ ನಾವು ಮಾನವ ಸಂಪನ್ಮೂಲವನ್ನು ಗುರುತಿಸಬೇಕಾಗಿದೆ, ಬಳಿಕ ಪ್ರಾಜೆಕ್ಟ್ ಟೀಮ್ನ್ನು ರಚಿಸಿ ಮುಂದಿನ ಪ್ರಕ್ರಿಯೆಗಳನ್ನು ಆರಂಭಿಸಬೇಕಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.