ನವದೆಹಲಿ: ಅಜಾತಶತ್ರು, ಭಾರತ ರತ್ನ ಧೀಮಂತ ರಾಜಕೀಯ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಹಲೋಕ ತ್ಯಜಿಸಿದ್ದಾರೆ. ದೇಶಕ್ಕೆ ದೇಶವೇ ಅವರ ಅಗಲುವಿಕೆಗೆ ದುಃಖತಪ್ತವಾಗಿದೆ.
93 ವರ್ಷದ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಹಲವಾರು ದಿನಗಳಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇಂದು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದರು.
1924 ರ ಡಿಸೆಂಬರ್ 25 ರಂದು ಜನಿಸಿದ ಇವರು, ಮೂರು ಬಾರಿ ಪ್ರಧಾನಿಗಳಾಗಿ ದೇಶದ ಚುಕ್ಕಾಣಿ ಹಿಡಿದಿದ್ದರು. 4 ದಶಕಗಳ ಕಾಲ ಸಂಸತ್ತು ಸದಸ್ಯರಾಗಿ ಸೇವೆ ಸಲ್ಲಿಸಿದರು. ಮೊರಾರ್ಜಿ ದೇಸಾಯಿ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
10 ಬಾರಿ ಲೋಕಸಭೆಗೆ ಮತ್ತು 2 ಬಾರಿ ರಾಜ್ಯಸಭೆಗೆ ಚುನಾಯಿತರಾಗಿದ್ದ ಇವರು ರಾಜಕೀಯ ವಲಯದಲ್ಲಿ ಅಜಾತಶತ್ರು ಎಂದೇ ಕರೆಯಲ್ಪಟ್ಟರು.
2014 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ’ಭಾರತ ರತ್ನ’ದಿಂದ ಅವರನ್ನು ಪುರಸ್ಕರಿಸಲಾಯಿತು.
ದೇಶದಾದ್ಯಂತ ಜನರು ದುಃಖತಪ್ತರಾಗಿದ್ದು, ಕಂಬನಿ ಗರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
End Of An Era, A Leader With No Enemies.
We Lost A Great Son Of Mother India.
Bharat Ratna Shri #AtalBihariVaajpayee Ji.
— Narendra Modi (@narendramodi177) August 16, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.