ತಿರುವನಂತಪುರಂ: ಭಾರೀ ಮಳೆಯ ಪರಿಣಾಮವಾಗಿ ಕೇರಳದ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇದುವರೆಗೆ 114 ಮಂದಿ ಅಸುನೀಗಿದ್ದು, ಒಂದು ಲಕ್ಷಕ್ಕೂ ಅಧಿಕ ಮಂದಿ ಪರಿಹಾರ ಶಿಬಿರಗಳಲ್ಲಿ ಭಾಗಹಿಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಗಾಗಿ ಕೇಂದ್ರ ಎಲ್ಲಾ ಮೂರು ಸೇನಾಪಡೆಗಳನ್ನು ನಿಯೋಜನೆಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೇರಳಕ್ಕೆ ಆಗಮಿಸಿ ನೆರೆ ಪರಿಸ್ಥಿತಿಗಳ ಬಗ್ಗೆ ಅವಲೋಕನ ನಡೆಸುವ ನಿರೀಕ್ಷೆ ಇದೆ.
14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ, 24 ಡ್ಯಾಂಗಳ ಬಾಗಿಲುಗಳನ್ನು ತೆರೆಯಲಾಗಿದ್ದು, ನಗರ ಮತ್ತು ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ.
ಕೊಚ್ಚಿ ಏರ್ಪೋರ್ಟ್ ಆ.26ರವರೆಗೆ ಬಂದ್ ಆಗಿರಲಿದೆ.
ಮಳೆಯಿಂದ ಮೃತರಾದವರ ಕುಟುಂಬಕ್ಕೆ ರೂ.4 ಲಕ್ಷ, ಮನೆ ಕಳೆದುಕೊಂಡವರಿಗೆ ರೂ.10 ಲಕ್ಷಗಳನ್ನು ಕೇರಳ ಸಿಎಂ ಪಿನರಾಯಿ ವಿಜಯನ್ ಘೋಷಣೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.