ಮಡಿಕೇರಿ: ಭಾರಿ ಮಳೆಗೆ ಕೊಡುಗು ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ನೆರೆ ಪರಿಸ್ಥಿತಿಯ ಅವಲೋಕನ ನಡೆಸಲು ಸಿಎಂ ಕುಮಾರಸ್ವಾಮಿ ಶನಿವಾರ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ. ಈ ವೇಳೆ ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.
ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ‘ಮಳೆಯಿಂದಾಗಿ ಕೊಡಗಿನ 11,000 ಮನೆಗಳು ಹಾನಿಗೀಡಾಗಿವೆ, 6 ಮಂದಿ ಮೃತರಾಗಿದ್ದಾರೆ. ಮೃತರ ಕುಟುಂಬಕ್ಕೆ ರೂ.5 ಲಕ್ಷ ನೀಡಲಿದ್ದೇವೆ’ ಎಂದರು.
ಹದಗೆಟ್ಟಿರುವ ರಸ್ತೆಗಳನ್ನು ತ್ವರಿತಗತಿಯಲ್ಲಿ ರಿಪೇರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ, ಎಟಿಎಂಗಳಲ್ಲಿ ಹಣ ಇಡುವಂತೆ ಬ್ಯಾಂಕುಗಳಿಗೆ ಮನವಿ ಮಾಡಲಾಗಿದೆ. ಇತರ ಪ್ರದೇಶಗಳ ಅಧಿಕಾರಿಗಳನ್ನು ಕೊಡಗಿಗೆ ಕಳುಹಿಸಿಕೊಡಲಾಗಿದೆ ಎಂದಿದ್ದಾರೆ.
ಎನ್ಡಿಆರ್ಎಫ್, ನೌಕೆ, ಸೇನೆ, ಆಗ್ನಿಶಾಮಕ ಸಿಬ್ಬಂದಿ, ಹೋಮ್ ಗಾರ್ಡ್ಗಳು ಸಏರಿದಂತೆ 1 ಸಾವಿರ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ, ವಾಯುಸೇನೆ ಅಪಾಯದಲ್ಲಿದ್ದ ಜನರನ್ನು ಮೇಲೆತ್ತಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡುತ್ತಿದೆ ಮತ್ತು ಅವರಿಗೆ ಅಗತ್ಯ ಸಾಮಾಗ್ರಿಗಳನ್ನು ಪೂರೈಕೆ ಮಾಡುತ್ತಿದೆ ಎಂದಿದ್ದಾರೆ.
200 ಎನ್ಸಿಸಿ ಕೆಡೆಟ್ಗಳೂ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.