ಬೆಂಗಳೂರು: ಆರ್ಟಿಇ ಕಾಯ್ದೆಯಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಹಾಗೂ ಉಳಿದ ವಿದ್ಯಾರ್ಥಿಗಳಿಗೂ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯ ನಡೆಯುತ್ತಿರುವುದು ತಿಳಿದು ಬಂದಿದ್ದು, ಇದರ ಕುರಿತು ಸರಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುತ್ತದೆ. ಅಲ್ಲದೇ ಇಂತಹ ಸಂಸ್ಥೆಗಳ ಮಾನ್ಯತೆಯನ್ನು ರದ್ದುಪಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಎಚ್ಚರಿಸಿದ್ದಾರೆ.
ಈ ಹಿಂದೆ ಇಂತಹ ತಾರತಮ್ಯಗಳ ಬಗ್ಗೆ ದೂರುಗಳು ಬಂದಿದ್ದು, ಇಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕಗಳಲ್ಲಿ ನ್ಯೂನತೆಗಳನ್ನು ಸರಿಪಡಿಸುವ ಅಂಶಗಳಿದ್ದಲ್ಲಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡುವಂತೆ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಸೂಚಿಸಲಾಗಿದೆ ಎಂದರು.
ಏಳನೇ ತರಗತಿಯ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಅರ್ಹತಾ ಮಟ್ಟದ ಪರೀಕ್ಷೆ ನಡೆಸಲಾಗುವುದಿಲ್ಲ. ಬದಲಾಗಿ ಅವರ ಕಲಿಕಾ ಸಾಮರ್ಥ್ಯದ ಮಟ್ಟವನ್ನು ಪರಿಶೀಲಿಸಲು ಪರೀಕ್ಷೆಗಳು ನಡೆಸಲಾಗುವುದು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.